ಕಾಡಾನೆ ಪುನರ್ವಸತಿ ಕಲ್ಪಿಸಲು “ಸಾಫ್ಟ್ ಏರಿಯಾ ರಿಲೀಸ್” ಯೋಜನೆ  | ಕೊಡಗಿನಲ್ಲಿ  2 ಸಾವಿರ ಹೆಕ್ಟೇರ್ ಪ್ರದೇಶ ಗುರುತು

February 17, 2025
10:41 PM
ಕಾಡಾನೆ ಮತ್ತು ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನ ಪ್ರಯತ್ನಗಳನ್ನು ನಡೆಸಲಾಗುತ್ತಿದೆ.

ಕೃಷಿ ಫಸಲು ನಷ್ಟ ಮತ್ತು ಜೀವಹಾನಿಗೆ ಕಾರಣವಾಗುತ್ತಿರುವ ಕಾಡಾನೆಗಳನ್ನು ಗುರುತಿಸಿ ಪುನರ್ವಸತಿ ಕಲ್ಪಿಸುವ ‘ಸಾಫ್ಟ್ ಏರಿಯಾ ರಿಲೀಸ್’ ಯೋಜನೆಯ ಅನುಷ್ಠಾನಕ್ಕೆ 2 ಸಾವಿರ ಹೆಕ್ಟೇರ್ ಪ್ರದೇಶವನ್ನು ಗುರುತಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎಂದು  ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ತಿಳಿಸಿದ್ದಾರೆ.

ಕಳೆದ ಮೂರು ದಶಕಗಳಿಂದ ಕೊಡಗು ಜಿಲ್ಲೆಯಾದ್ಯಂತ ಕಾಡಾನೆಗಳ ಉಪಟಳ ಮಿತಿ ಮೀರಿದೆ. ಇವುಗಳ ನಿಯಂತ್ರಣಕ್ಕಾಗಿ ರಾಜ್ಯ ಸಕಾ೯ರ ಮುಂದಾಗಿದೆ. ಗುರುತು ಮಾಡಿದ ಪುಂಡಾನೆಗಳ ಸ್ಥಳಾಂತರಕ್ಕೆ ಗುರುತಿಸುವ ಪ್ರದೇಶ ಅರಣ್ಯ ಪ್ರದೇಶ ಸೇರಿದಂತೆ .  ಜಾಗ ಗುರುತಿಸಲ್ಪಟ್ಟ ಬಳಿಕ, ಒಟ್ಟು ಪ್ರದೇಶದ ಸುತ್ತ ಕಾಡಾನೆಗಳು ಮರಳಿ ಬಾರದಂತೆ ಅಗತ್ಯ ರಕ್ಷಣಾ ವ್ಯವಸ್ಥೆಗಳನ್ನು ಅಳವಡಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.   ಕಾಡಾನೆ ಮತ್ತು ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ಪ್ರಸ್ತುತ ಕೊಡಗು ಜಿಲ್ಲೆಯ ಯಾವೆಲ್ಲ ವಿಭಾಗಗಳಲ್ಲಿ ಕಂದಕಗಳು ಮತ್ತು ರೈಲ್ವೆ ಹಳಿಯ ಬೇಲಿಗಳಿವೆಯೋ, ಅಲ್ಲಿ ಹಾಳಾದ ಭಾಗಗಳನ್ನು ಗುರುತಿಸಿ ದುರಸ್ತಿ ಪಡಿಸುವ ಕೆಲಸ ಕಾರ್ಯಗಳಿಗೆ ಸರ್ಕಾರ  21 ಕೋಟಿ ರೂ. ನೆರವನ್ನು ಬಿಡುಗಡೆ ಮಾಡಿದೆ. ಇದರ ಮೂಲಕ ಕಾಡಾನೆಗಳ ಗಂಭೀರ ಆತಂಕವನ್ನು ಎದುರಿಸುತ್ತಿರುವ ಪಂಚಾಯ್ತಿ ವ್ಯಾಪ್ತಿಯ ಕಂದಕಗಳ ದುರಸ್ತಿ, ರೈಲ್ವೆ ಹಳಿ ಬೇಲಿಗಳ ದುರಸ್ತಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಅರಣ್ಯ ಇಲಾಖೆ ಮುಂದಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror