ಕೃಷಿ ಫಸಲು ನಷ್ಟ ಮತ್ತು ಜೀವಹಾನಿಗೆ ಕಾರಣವಾಗುತ್ತಿರುವ ಕಾಡಾನೆಗಳನ್ನು ಗುರುತಿಸಿ ಪುನರ್ವಸತಿ ಕಲ್ಪಿಸುವ ‘ಸಾಫ್ಟ್ ಏರಿಯಾ ರಿಲೀಸ್’ ಯೋಜನೆಯ ಅನುಷ್ಠಾನಕ್ಕೆ 2 ಸಾವಿರ ಹೆಕ್ಟೇರ್ ಪ್ರದೇಶವನ್ನು ಗುರುತಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎಂದು ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ತಿಳಿಸಿದ್ದಾರೆ.
ಕಳೆದ ಮೂರು ದಶಕಗಳಿಂದ ಕೊಡಗು ಜಿಲ್ಲೆಯಾದ್ಯಂತ ಕಾಡಾನೆಗಳ ಉಪಟಳ ಮಿತಿ ಮೀರಿದೆ. ಇವುಗಳ ನಿಯಂತ್ರಣಕ್ಕಾಗಿ ರಾಜ್ಯ ಸಕಾ೯ರ ಮುಂದಾಗಿದೆ. ಗುರುತು ಮಾಡಿದ ಪುಂಡಾನೆಗಳ ಸ್ಥಳಾಂತರಕ್ಕೆ ಗುರುತಿಸುವ ಪ್ರದೇಶ ಅರಣ್ಯ ಪ್ರದೇಶ ಸೇರಿದಂತೆ . ಜಾಗ ಗುರುತಿಸಲ್ಪಟ್ಟ ಬಳಿಕ, ಒಟ್ಟು ಪ್ರದೇಶದ ಸುತ್ತ ಕಾಡಾನೆಗಳು ಮರಳಿ ಬಾರದಂತೆ ಅಗತ್ಯ ರಕ್ಷಣಾ ವ್ಯವಸ್ಥೆಗಳನ್ನು ಅಳವಡಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಕಾಡಾನೆ ಮತ್ತು ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ಪ್ರಸ್ತುತ ಕೊಡಗು ಜಿಲ್ಲೆಯ ಯಾವೆಲ್ಲ ವಿಭಾಗಗಳಲ್ಲಿ ಕಂದಕಗಳು ಮತ್ತು ರೈಲ್ವೆ ಹಳಿಯ ಬೇಲಿಗಳಿವೆಯೋ, ಅಲ್ಲಿ ಹಾಳಾದ ಭಾಗಗಳನ್ನು ಗುರುತಿಸಿ ದುರಸ್ತಿ ಪಡಿಸುವ ಕೆಲಸ ಕಾರ್ಯಗಳಿಗೆ ಸರ್ಕಾರ 21 ಕೋಟಿ ರೂ. ನೆರವನ್ನು ಬಿಡುಗಡೆ ಮಾಡಿದೆ. ಇದರ ಮೂಲಕ ಕಾಡಾನೆಗಳ ಗಂಭೀರ ಆತಂಕವನ್ನು ಎದುರಿಸುತ್ತಿರುವ ಪಂಚಾಯ್ತಿ ವ್ಯಾಪ್ತಿಯ ಕಂದಕಗಳ ದುರಸ್ತಿ, ರೈಲ್ವೆ ಹಳಿ ಬೇಲಿಗಳ ದುರಸ್ತಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಅರಣ್ಯ ಇಲಾಖೆ ಮುಂದಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಭಾರತದ ಮೇಲೆ ನೈಋತ್ಯ ಮಾನ್ಸೂನ್‌ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649
ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490