ಮಣ್ಣಿನ ಆರೋಗ್ಯ, ಫಲವತ್ತತೆ ಮತ್ತು ಉತ್ಪಾದಕತೆ ಕುರಿತು ರೈತರು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪ್ರತಿವರ್ಷ ಡಿಸೆಂಬರ್ 5 ರಂದು ಜಾಗತಿಕ ಮಣ್ಣಿನ ದಿನವೆಂದು ಆಚರಣೆ ಮಾಡಲಾಗುತ್ತಿದೆ ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ತಿಳಿಸಿದ್ದಾರೆ. ಜಾಗತಿಕ ಮಣ್ಣಿನ ದಿನದ ಹಿನ್ನೆಲೆಯಲ್ಲಿ ಮಾತನಾಡಿದ ಸಚಿವರು, ಆರೋಗ್ಯಕ್ಕೆ ಉತ್ತಮ ಆಹಾರ ಸೇವನೆ ಅಗತ್ಯ. ಆರೋಗ್ಯಕರ ಮಣ್ಣಿನಿಂದ ಮಾತ್ರ ಉತ್ತಮ ಆಹಾರ ಉತ್ಪಾದನೆ ಸಾಧ್ಯ. ಮಣ್ಣಿಗೂ ಮನುಷ್ಯನ ಜೀವನಕ್ಕೂ ಅವಿನಾಭಾವ ಸಂಬಂಧವಿದೆ ಎಂದು ಹೇಳಿದರು. ರಾಸಾಯನಿಕ ಗೊಬ್ಬರ, ಅವೈಜ್ಞಾನಿಕ ನೀರು ಹಾಗೂ ಏಕ ಬೆಳೆ ಮಾದರಿಗಳಿಂದ ಮಣ್ಣಿನ ಫಲವತ್ತತೆ ಕುಸಿಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel