ಕೃಷಿ ಮಣ್ಣು ಸಾಗಾಟಕ್ಕೆ ತೊಂದರೆ ಕೊಡಬೇಡಿ ; ಅಧಿಕಾರಿಗಳಿಗೆ ಸಂಸದ ಕೋಟ ಸೂಚನೆ

February 24, 2026
6:25 AM
ಕೃಷಿ ಉದ್ದೇಶಕ್ಕಾಗಿ ಮಣ್ಣು ಸಾಗಾಟ ಮಾಡುವ ರೈತರಿಗೆ ತೊಂದರೆ ಕೊಡಬಾರದು ಎಂದು ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೃಷಿ ಚಟುವಟಿಕೆಗಳಿಗಾಗಿ ತಮ್ಮ ಜಮೀನಿನ ಮಣ್ಣನ್ನು ಸಾಗಾಟ ಮಾಡುತ್ತಿರುವ ರೈತರಿಗೆ ಅನಗತ್ಯ ತೊಂದರೆ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸಬೇಕು ಎಂದು ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದ್ದಾರೆ.

ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕೃಷಿ ಉದ್ದೇಶದ ಮಣ್ಣು ಸಾಗಾಣಿಕೆ ವೇಳೆ ಎದುರಾಗುತ್ತಿರುವ ಅಡೆತಡೆಗಳ ಕುರಿತು ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಅನೇಕ ವರ್ಷಗಳಿಂದ ರೈತರು ತಮ್ಮ ಸ್ವಂತ ಜಮೀನಿನ ಮಣ್ಣನ್ನು ಕೃಷಿ ಉದ್ದೇಶಕ್ಕಾಗಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸಾಗಿಸಿ ಬಳಸುತ್ತಿದ್ದಾರೆ. ಇದು ಯಾವುದೇ ವಾಣಿಜ್ಯ ಅಥವಾ ಅನ್ಯ ಉದ್ದೇಶಕ್ಕಾಗಿ ನಡೆಯುವ ಮಣ್ಣು ಸಾಗಾಟವಲ್ಲ ಎಂಬುದನ್ನು ಅಧಿಕಾರಿಗಳು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಅವರು ಹೇಳಿದರು.

ಈ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ಮಣ್ಣು ಸಾಗಾಟದ ವೇಳೆ ನಿಯಮಾನುಸಾರ ರೈತರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸಂಸದರು ಸ್ಪಷ್ಟ ನಿರ್ದೇಶನ ನೀಡಿದರು. ರೈತರ ಕೃಷಿ ಕಾರ್ಯಗಳಿಗೆ ಅಡ್ಡಿಯಾಗುವ ರೀತಿಯ ಕ್ರಮಗಳನ್ನು ತಪ್ಪಿಸಲು ಸಂಬಂಧಿಸಿದ ಎಲ್ಲಾ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕೆಂದು ಅವರು ಸೂಚಿಸಿದರು.

Udupi-Chikkamagaluru MP Kota Srinivas Poojary instructed officials not to harass farmers transporting soil within their own land for agricultural purposes. He emphasized that such activities are part of normal farming practices and officials must ensure farmers do not face unnecessary obstacles.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ವರದಿ | 16-03-2026 | ಹವಾಮಾನದಲ್ಲಿ ಏಕಾಏಕಿ ಬದಲಾವಣೆ – ರಾಜ್ಯದ ಹಲವೆಡೆ ಸಂಜೆ ಮಳೆ ಸಾಧ್ಯತೆ
March 16, 2026
3:26 PM
by: ಸಾಯಿಶೇಖರ್ ಕರಿಕಳ
ಎಲ್ಲೆಡೆ ಹೆಚ್ಚಾಗುತ್ತಿರುವ ಬಿಸಿಲ ಬೇಗೆ ; ಪ್ರಾಣಿ-ಪಕ್ಷಿಗಳಿಗೆ ನೀರಿನ ಅಭಾವ
March 16, 2026
7:13 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಸಬಲೀಕರಣಕ್ಕೆ ಜಾಗತಿಕ ಘೋಷಣೆ : 900ಕ್ಕೂ ಹೆಚ್ಚು ಕೃಷಿ ಸಂಸ್ಥೆಗಳನ್ನು ಜೋಡಿಸುವ ರಾಷ್ಟ್ರೀಯ ಜೆಂಡರ್ ಪ್ಲಾಟ್‌ಫಾರ್ಮ್‌ ಘೋಷಣೆ
March 16, 2026
7:06 AM
by: ಮಿರರ್‌ ಡೆಸ್ಕ್
ಮುಂಗಾರು ಬೆಳೆ ಋತುವಿಗೆ ಸಕಲ ಸಿದ್ದತೆ | ದೇಶದಲ್ಲಿ ರಸಗೊಬ್ಬರ ದಾಸ್ತಾನು ದ್ವಿಗುಣ
March 15, 2026
10:00 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror