MIRROR FOCUS

1 ಕೋಟಿ ಮನೆಗಳಿಗೆ ಸೋಲಾರ್, 300 ಯೂನಿಟ್ ವಿದ್ಯುತ್ ಫ್ರೀ ಹೇಗೆ..? | ಉಚಿತ ಕಾನ್ಸೆಪ್ಟ್‌ ಬದಲಾಯಿಸಿದ್ದು ಹೇಗೆ ? |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Union Minister Nirmala Sitharaman) ಕೇಂದ್ರದ ಮಧ್ಯಂತರ ಬಜೆಟ್ ಮಂಡಿಸುತ್ತಿದ್ದು, ಆರಂಭದಲ್ಲಿ ಸರ್ಕಾರದ (Modi Government) ಅಭಿವೃದ್ಧಿ ಕೆಲಸಗಳ ಮಾಹಿತಿಯನ್ನು ನೀಡಿದರು. ಗ್ರಾಮೀಣ(Rural) ಭಾಗದಲ್ಲಿ 3 ಕೋಟಿ ಮನೆಗಳ ನಿರ್ಮಾಣ ಮಾಡಲಾಗಿದೆ. ಅದರಲ್ಲಿ 1 ಕೋಟಿ ಮನೆಗಳ ಮೇಲೆ ಸೌರ ವಿದ್ಯುತ್ ಅಳವಡಿಕೆ ಮಾಡಲಾಗುತ್ತದೆ. ಉಚಿತ ಸೋಲಾರ್ ವಿದ್ಯುತ್ ಘೋಷಿಸಲಾಗಿದೆ. ಮಧ್ಯಮ ವರ್ಗಕ್ಕೆ ವಸತಿ ಯೋಜನೆ ಮೂಲಕ ಮನೆ ನೀಡಲಾಗಿದೆ.

Advertisement

ರೈತರಿಗೆ(Farmer) ಆಧುನಿಕ ತಂತ್ರಜ್ಞಾನದ ಸಹಾಯಕ್ಕಾಗಿ ನ್ಯಾನೋ ಯೂರಿಯಾ ಎಲ್ಲಾ ವಲಯಗಳಿಗೆ ವಿಸ್ತರಣೆ ಮಾಡಲಾಗಿದೆ. ಆತ್ಮನಿರ್ಭರ್ ಆಯಿಲ್ ಸೀಡ್ ಅಭಿಯಾನ ಆರಂಭಿಸಲಾಗಿದೆ. ಎಣ್ಣೆಬೀಜಗಳಲ್ಲಿ ಆತ್ಮನಿರ್ಭರತೆಗಾಗಿ ಹೆಚ್ಚಿನ ಒತ್ತು ನೀಡಲಾಗಿದೆ. ಹೈನುಗಾರಿಕೆ ರೈತರಿಗೆ ಹಾಲು ಹೆಚ್ಚಳಕ್ಕೆ ಯೋಜನೆ. ಡೇರಿಗೆ ಮೂಲಭೂತ ಸೌಕರ್ಯಗಳ ಹೆಚ್ಚಳ ಮಾಡಲಾಗುತ್ತಿದೆ ಎಂದರು. ಮತ್ಸ್ಯ ಸಂಪದ ಯೋಜನೆಯಿಂದ ಮೀನುಗಾರರಿಗೆ ನೆರವು ನೀಡಲಾಗಿದೆ. ಮತ್ಸ್ಯ ಸಂಪದ ಯೋಜನೆ ಮೂಲಕ 55 ಲಕ್ಷ ಉದ್ಯೋಗ ಸೃಷ್ಟಿಯ ಗುರಿಯನ್ನು ಹೊಂದಲಾಗಿದೆ.

ಅಭಿವೃದ್ಧಿಗಾಗಿ ಸರ್ಕಾರದ ಕೆಲಸ : 10 ವರ್ಷಗಳಲ್ಲಿ ಭಾರತದ ಆರ್ಥಿಕತೆ ಬದಲಾವಣೆ ಕಂಡಿದೆ. ಮೋದಿ ನೇತೃತ್ವದಲ್ಲಿ ದೇಶದಲ್ಲಿ ಹಲವು ಬದಲಾವಣೆ, ಜನಪರ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಉದ್ಯೋಗ, ಉದ್ದಿಮೆಗೆ ಹಲವು ಅವಕಾಶ ಕಲ್ಪಿಸಲಾಗಿದೆ. 2ನೇ ಅವಧಿಯಲ್ಲಿ ಎಲ್ಲಾ ಜನರ ಅಭಿವೃದ್ಧಿಗಾಗಿ ಸರ್ಕಾರ ಕೆಲಸ ಮಾಡಿದೆ, ಮಾಡುತ್ತಿದೆ.

80 ಕೋಟಿ ಜನರಿಗೆ ಉಚಿತ ಪಡಿತರ : ಉಜ್ವಲ ಭವಿಷ್ಯಕ್ಕೆ ಮೋದಿ ಸರ್ಕಾರದಿಂದ ಹಲವು ಯೋಜನೆಗಳನ್ನು ಜಾರಿ ಗೊಳಿಸಲಾಗಿದೆ. ಕಳೆದ 10 ವರ್ಷಗಳಲ್ಲಿ ಪ್ರತಿಯೊಬ್ಬರಿಗೂ ಯೋಜನೆ ತಲುಪಿದೆ. ಎಲ್ಲರಿಗೂ ಗ್ಯಾಸ್, ನೀರು, ಬ್ಯಾಂಕ್ ಖಾತೆ ಒದಗಿಸೋ ಗುರಿಯನ್ನು ಸರ್ಕಾರ ಹೊಂದಿದೆ. 80 ಕೋಟಿ ಜನರಿಗೆ ಉಚಿತ ಪಡಿತರ ಒದಗಿಸಲಾಗ್ತಿದೆ. ಅಭಿವೃದ್ಧಿ ಮೂಲಕ ಸಾಮಾಜಿಕ ನ್ಯಾಯಕ್ಕೆ ಪಣ ತೊಟ್ಟಿದೆ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದರು.

ಹಳ್ಳಿಗಳ ಅಭಿವೃದ್ಧಿ : ಕೊರೋನಾ ನಂತರ ಆರ್ಥಿಕತೆಯು ವೇಗವಾಗಿ ಬೆಳೆಯುತ್ತಿದೆ. ಜನರಿಗೆ ಹೊಸ ಉದ್ಯೋಗಾವಕಾಶಗಳು ಸಿಕ್ಕಿವೆ. ನಮ್ಮ ಸರ್ಕಾರ ಯುವ ದೇಶದ ಆಕಾಂಕ್ಷೆಗಳನ್ನು ಈಡೇರಿಸಿದೆ. ನಮ್ಮ ಸರ್ಕಾರವು ಹಳ್ಳಿಗಳ ಜನರ ಅಭಿವೃದ್ಧಿಗೆ ಒತ್ತು ನೀಡಿದೆ ಎಂದು ವಿತ್ತ ಸಚಿವೆ ಹೇಳಿದರು.

– ಅಂತರ್ಜಾಲ ಮಾಹಿತಿ(ನ್ಯೂಸ್‌ 18)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ

ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…

9 hours ago

ರಬ್ಬರ್ ತೋಟಗಳ ಮಾಹಿತಿ ಸಂಗ್ರಹ | ರಬ್ಬರ್ ತೋಟಗಳ ಜಿಯೋ-ಮ್ಯಾಪಿಂಗ್

ನೈಸರ್ಗಿಕ ರಬ್ಬರ್ ಮತ್ತು ಅದರ ಉತ್ಪನ್ನಗಳು ಅರಣ್ಯನಾಶ ಮುಕ್ತ ನಿಯಮಗಳಿಗಾಗಿ ಯುರೋಪಿಯನ್ ಒಕ್ಕೂಟ…

9 hours ago

ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |

ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

16 hours ago

ಒತ್ತುವರಿಯಾಗಿರುವ  ಕೆರೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸೂಚನೆ

ಖಾಸಗಿಯವರಿಂದ ಒತ್ತುವರಿಯಾಗಿರುವ  ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ…

22 hours ago

ಭಾರತದಿಂದ ಅಫ್ಘಾನಿಸ್ತಾನಕ್ಕೆ 4.8 ಟನ್ ಜೀವರಕ್ಷಕ ಲಸಿಕೆ ರವಾನೆ

ಭಾರತವು 4.8 ಟನ್ ಲಸಿಕೆಗಳನ್ನು ಅಫ್ಘಾನಿಸ್ತಾನಕ್ಕೆಕಳುಹಿಸುವ ಮೂಲಕ ಮಾನವೀಯ ನೆರವು ನೀಡಿದೆ. ಇದರಲ್ಲಿ…

22 hours ago

ಭ್ರಷ್ಟಾಚಾರದ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ  | ಉಪಲೋಕಾಯುಕ್ತ ಬಿ. ವೀರಪ್ಪ ಎಚ್ಚರಿಕೆ

ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ಭ್ರಷ್ಟಾಚಾರದ ವಿರುದ್ಧ…

23 hours ago