Advertisement
MIRROR FOCUS

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

Share

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ ಪೂರೈಸುವ ಉದ್ದೇಶದೊಂದಿಗೆ ಕೇಂದ್ರ ಸರ್ಕಾರ ಕಳೆದ ವರ್ಷ ಆರಂಭಿಸಿರುವ ‘ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್‌ ಯೋಜನೆ’ಯಿಂದ ಇದಾಗಲೇ 10 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಸೌರ ಫಲಕ ಅಳವಡಿಸಲಾಗಿದೆ.  ಮಾರ್ಚ್ 2027 ರ ವೇಳೆಗೆ ಒಂದು ಕೋಟಿಗೂ ಹೆಚ್ಚು ಮನೆಗಳಿಗೆ ಸೌರಶಕ್ತಿ ಒದಗಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ಕೇಂದ್ರ ಇಂಧನ ಸಚಿವ ಪ್ರಹ್ಲಾದ್‌ ಜೋಶಿ  ತಿಳಿಸಿದ್ದಾರೆ.

ಈ ಯೋಜನೆಯಿಂದ ಪ್ರತಿ ಮನೆ, ತಿಂಗಳಿಗೆ 300 ಯುನಿಟ್‌ ವಿದ್ಯುತ್‌ ಪಡೆಯಲಿದೆ. ಅಲ್ಲದೇ ಹೆಚ್ಚುವರಿ ವಿದ್ಯುತ್‌ ಮಾರಾಟ ಮಾಡುವ ಮೂಲಕ ಹಣವನ್ನು ಕೂಡ ಗಳಿಸಬಹುದಾಗಿದೆ ಎಂದಿದ್ದಾರೆ. ಈ ಕುರಿತು ರಾಜ್ಯಸಭೆಗೆ ನಿನ್ನೆ ಮಾಹಿತಿ ನೀಡಿದ್ದ ಸಚಿವರು, 12 ಸಾರ್ವಜನಿಕ ವಲಯದ ಬ್ಯಾಂಕ್‌ಗಳ  ಮೂಲಕ 2 ಲಕ್ಷ ರೂಪಾಯಿವರೆಗಿನ ಸಾಲಗಳಿಗೆ ಶೇಕಡಾ 6.75ರಷ್ಟು ಸಬ್ಸಿಡಿ ಬಡ್ಡಿ ದರದಲ್ಲಿ ಸಾಲ ಒದಗಿಸಲಾಗುತ್ತದೆ.  ಕೇಂದ್ರ ಸರ್ಕಾರ ಈ ಯೋಜನೆಗೆ 75 ಸಾವಿರದ 21 ಕೋಟಿ ರೂಪಾಯಿಗಳನ್ನು  ಮೀಸಲು ಇರಿಸಿದೆ. ಇದರಿಂದ ಸರ್ಕಾರಕ್ಕೆ ವಾರ್ಷಿಕ 75 ಸಾವಿರ ರೂಪಾಯಿಗಿಂತಲೂ ಅಧಿಕ  ವಿದ್ಯುತ್‌ ಉತ್ಪಾದನೆ ವೆಚ್ಚ ಉಳಿತಾಯವಾಗುತ್ತಿದೆ ಎಂದು ತಿಳಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

4 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

4 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

5 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

15 hours ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

15 hours ago

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

19 hours ago