ರೈತರ ಪಂಪ್ ಸೆಟ್ ಗಳಿಗೆ ಪ್ರತಿನಿತ್ಯ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ವಿಧಾನ ಪರಿಷತ್ ನಲ್ಲಿ ತಿಳಿಸಿದ್ದಾರೆ. ಮುಂಬರುವ ದಿನಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಸೌರ ವಿದ್ಯುತ್ ಉತ್ಪಾದಿಸಿ ರೈತರ ಪಂಪ್ ಸೆಟ್ ಗಳಿಗೆ ಪೂರೈಸಲು ಚಿಂತನೆ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.………ಮುಂದೆ ಓದಿ……..
ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಬಸವನಗೌಡ ಬಾದರ್ಲಿ ಅವರ ಪರವಾಗಿ ಸದಸ್ಯ ಡಿ.ಟಿ ಶ್ರೀನಿವಾಸ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಿರಂತರವಾಗಿ 7 ಗಂಟೆ ಕಾಲ ವಿದ್ಯುತ್ ಕೊಡಲು ಸಾಧ್ಯವಾಗದೆ ಇದ್ದರೆ ಬೆಳಿಗ್ಗೆ ಹಾಗೂ ರಾತ್ರಿ ವೇಳೆ ಕ್ರಮವಾಗಿ 3 ಗಂಟೆ ಹಾಗೂ 4 ಗಂಟೆಗಳಂತೆ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಅಸಾಂಪ್ರದಾಯಿಕ ಇಂಧನ ಮೂಲಗಳಿಂದ ವಿದ್ಯುತ್ ಉತ್ಪಾದಿಸುವುದನ್ನು ಪ್ರೋತ್ಸಾಹಿಸಲು ಸರ್ಕಾರ, ಕರ್ನಾಟಕ ನವೀಕರಿಸಬಹುದಾದ ಇಂಧನ ನೀತಿ ಜಾರಿಗೆ ತಂದಿದೆ. ರಾಯಚೂರು ಮತ್ತು ಕಲಬುರಗಿ ಯಲ್ಲಿ ಪವನ ಮತ್ತು ಸೌರ ವಿದ್ಯುತ್ ಉತ್ಪಾದನೆಗೆ ವಿಶೇಷ ಒತ್ತು ನೀಡಲಾಗುತ್ತಿದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು. ಮುಂಬರುವ ದಿನಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಸೌರ ವಿದ್ಯುತ್ ಉತ್ಪಾದಿಸಿ ರೈತರ ಪಂಪ್ ಸೆಟ್ ಗಳಿಗೆ ಪೂರೈಸಲು ಚಿಂತನೆ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.
ಒಂಬತ್ತು ತಿಂಗಳ ಹಿಂದೆ ಜೂನ್ 5 ರಂದು ISS ಅಂದರೆ ಅಂತಾರಾಷ್ಟ್ರೀಯ ಬಾಹ್ಯಾಕಾಶ…
ಮಂಗನಕಾಯಿಲೆ ಸೋಂಕು ಮಲೆನಾಡು ಕಡೆಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕೆಲವು ಕಡೆ…
ಅಮೆರಿಕದ ಹಲವು ರಾಜ್ಯಗಳಲ್ಲಿ ಅತ್ಯಂತ ಪ್ರಬಲ ಚಂಡಮಾರುತ ಹಾಗೂ ಸುಳಿಗಾಳಿ ಉಂಟಾಗಿದ್ದು, ಈವರೆಗೆ…
ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಾ. 20 ರವರೆಗೆ ಬಿಸಿ ಗಾಳಿ ಬೀಸುವ…
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಹಿಮಪಾತ ಆರಂಭವಾಗಿದೆ. ಕಾಶ್ಮೀರದ ಹಲವು ಭಾಗಗಳಲ್ಲಿ ಎರಡು ದಿನಗಳ…
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ, ಕೊಡಗು ಜಿಲ್ಲೆಯ…