Advertisement
MIRROR FOCUS

ಬೆಂಗಳೂರಿನ ಈಜೀಪುರದ ಘನತ್ಯಾಜ್ಯ ಘಟಕ | ಪ್ರತಿನಿತ್ಯ ಸುಮಾರು 170 ಮೆಟ್ರಿಕ್ ಟನ್ ತ್ಯಾಜ್ಯ ವಿಲೇವಾರಿ

Share

ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ವ್ಯಾಪ್ತಿಯ ಈಜೀಪುರ ದ್ವಿತೀಯ ಹಂತದ ಘನತ್ಯಾಜ್ಯ ವರ್ಗಾವಣೆ ಘಟಕ ಯಶಸ್ವಿ ಕಾರ್ಯನಿರ್ವಹಣೆ ಮಾಡುತ್ತಿದೆ ಎಂದು ಆಯುಕ್ತ ಕೆ.ಎನ್.ರಮೇಶ್ ತಿಳಿಸಿದ್ದಾರೆ.

ಈಜಿಪುರದಲ್ಲಿರುವ ದ್ವಿತೀಯ ಹಂತದ ಘನತ್ಯಾಜ್ಯ ಘಟಕ ಹಾಗೂ ಸ್ವಯಂ ಚಾಲಿತ ತ್ಯಾಜ್ಯ ವಿಂಗಡಣೆ ಘಟಕಕ್ಕೆ  ಭೇಟಿ ನೀಡಿ ಘಟಕದ ಕಾರ್ಯವೈಖರಿಯನ್ನು ಅವರು ಪರಿಶೀಲನೆ ನಡೆಸಿದರು. 2024 ರ ಮಾರ್ಚ್‌ನಿಂದ ಈ ಘಟಕ ಕಾರ್ಯನಿರ್ವಹಿಸುತ್ತಿದ್ದು,  ಪ್ರತಿನಿತ್ಯ 8 ವಾರ್ಡ್‌ಗಳಿಂದ ಸುಮಾರು 160 ರಿಂದ 170 ಮೆಟ್ರಿಕ್ ಟನ್ ತ್ಯಾಜ್ಯ ಬರಲಿದೆ.  ಘಟಕದಲ್ಲಿ 35 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಈ ತ್ಯಾಜ್ಯವನ್ನು ತ್ಯಾಜ್ಯ ಸಂಸ್ಕರಣಾ ಘಟಕಗಳಿಗೆ ಕ್ಯಾಪ್ಸೂಲ್‌ಗಳ ಮೂಲಕ ರವಾನಿಸಲಾಗುತ್ತದೆ ಎಂದು ಕೆ.ಎನ್. ರಮೇಶ್ ತಿಳಿಸಿದರು. ಘಟಕದಲ್ಲಿ 7 ಕ್ಯಾಫ್ಸೂಲ್ ವಾಹನಗಳು ಕಾರ್ಯನಿರ್ವಹಿಸುತ್ತಿದ್ದು, ಒಂದು ಕ್ಯಾಪ್ಸೂಲ್ ವಾಹನಕ್ಕೆ ಎರಡು ಕಂಟೈನರ್‌ಗಳು ಇರಲಿವೆ.  ವಾರ್ಡ್‌ಗಳಿಂದ ಆಟೋ ಟಿಪ್ಪರ್‌ಗಳ ಮೂಲಕ ಬರುವ ತ್ಯಾಜ್ಯವನ್ನು ಕಂಪ್ರೆಸ್ ಮಾಡಿ ತುಂಬುವುದರಿಂದ 1 ಕ್ಯಾಫ್ಸೂಲ್‌ನಲ್ಲಿ 16 ರಿಂದ 18 ಟನ್ ತ್ಯಾಜ್ಯವನ್ನು ತುಂಬಹುದಾಗಿದ್ದು,  ಇದರಿಂದ ಕಡಿಮೆ ವಾಹನಗಳನ್ನು ಬಳಸಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

4 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

1 day ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

1 day ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

1 day ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

1 day ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

2 days ago