ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ವೈಜ್ಞಾನಿಕ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಶಾಸಕ್ ಹೆಚ್.ಡಿ ತಮ್ಮಯ್ಯ ಹೇಳಿದ್ದಾರೆ. ವಸ್ತಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಡಾನೆಗಳು ಹಾನಿ ಮಾಡಿರುವ ರೈತರ ಜಮೀನುಗಳಿಗೆ ಭೇಟಿ ನೀಡಿ ಪರಿಶಿಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಆನೆ ಕಾರಿಡಾರ್ ನಿರ್ಮಾಣದ ಬಗ್ಗೆ ಮುಂದಿನ ಅಧಿವೇಶದನದಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ. ಸುಮಾರು 20 ಕ್ಕ್ಕೂ ಹೆಚ್ಚು ಕಾಡಾನೆಗಳು ಚಿಕ್ಕಮಗಳೂರು ತಾಲೂಕು ವ್ಯಾಪ್ತಿಗಳಲ್ಲಿ ಸಂಚಾರ ಮಾಡುತ್ತಿದ್ದು ಅವುಗಳನ್ನು ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel