ರಾಜ್ಯಾದ್ಯಂತ ಇರುವ ಜಲಾಶಯಗಳು ಹಾಗೂ ಕೆರೆಗಳ ಹೂಳು ತೆಗೆಸಿ ರೈತರ ಜಮೀನಿಗೆ ಸರಬರಾಜು ಮಾಡಲು ಅವಶ್ಯ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹಿಸಿದ್ದಾರೆ.ಸೆ. 30ರೊಳಗೆ ರೈತರ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ರಾಜ್ಯ ರೈತ ಸಂಘಟನೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಹೇಳಿದ್ದಾರೆ.
ತೆಲಂಗಾಣ ರಾಜ್ಯದ ಮಾದರಿಯಲ್ಲಿ ಕೃಷಿ ಪಂಪ್ ಸೆಟ್ ಗಳ ರೈತರು ಆಧಾರ್ ಲಿಂಕ್ ಮಾಡುತ್ತಿರುವ ವಿಚಾರ ಕೈ ಬಿಡಬೇಕು. ಕೃಷಿ ಪಂಪ್ ಸೆಟ್ ಗಳ ಅಕ್ರಮ ಸಕ್ರಮ ಯೋಜನೆ ಮರು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ರದ್ದು ಮಾಡಬೇಕು. ರಾಜ್ಯ ಸರ್ಕಾರ ಭರವಸೆ ನೀಡಿದಂತೆ ಕೃಷಿ ಸಾಲ ಪಾವತಿಸದ ರೈತರ ಜಮೀನು ವಶಪಡಿಸಿಕೊಳ್ಳುವ ಸರ್ಪ್ರೈಸಿ ಕಾಯ್ದೆ ಜಾರಿಗೆ ತಂದಿರುವುದನ್ನ ರದ್ದುಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ. ಬರ. ಅತಿವೃಷ್ಟಿ ಹಾನಿ. ಪ್ರವಾಹ ಹಾನಿ. ಎನ್ ಡಿ ಆರ್ ಎಫ್ ಪರಿಹಾರ ಮಾನದಂಡ ತಿದ್ದುಪಡಿ ಮಾಡಿ ವೈಜ್ಞಾನಿಕ ಮಾನದಂಡ ಅನುಸರಿಸಿ ಪರಿಹಾರ ನೀಡಬೇಕು. ಖಾಸಗಿ ಫೈನಾನ್ಸ್ ಗಳು ಬ್ಯಾಂಕುಗಳು ಸಾಲ ವಸೂಲಿಗೆ ನೋಟಿಸ್ ನೀಡಿ ಕಿರುಕುಳ ನೀಡಿ ಜಮೀನುಗಳನ್ನು ಹರಾಜು ಮಾಡುತ್ತಿರುವುದು ನಿಲ್ಲಿಸಬೇಕು. ರಾಜ್ಯ ಸರ್ಕಾರ ಜಿಂದಾಲ್ ಕಂಪನಿಗೆ 3,667 ಎಕರೆ ಜಮೀನು ನೀಡಿರುವುದನ್ನು ಕೈ ಬಿಡಬೇಕು ಎಂದು ಒತ್ತಾಯಿಸಿದ್ದಾರೆ.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…