ಯಾವುದೇ ಕಾರಣಕ್ಕೂ ಬಗರ್ ಹುಕುಂ ರೈತರನ್ನು ಒಕ್ಕಲೆಬ್ಬಿಸದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ತುಮಕೂರಿನ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ಬಗರ್ ಹುಕುಂ ಅರ್ಜಿ ಸಲ್ಲಿಸಿರುವವರಿಗೆ ಅನ್ಯಾಯವಾಗಬಾರದು, ಸರ್ಕಾರದ ಸೂಚನೆಯಂತೆ 3 ಎಕರೆಗಿಂತ ಕಡಿಮೆ ಭೂಮಿ ಒತ್ತುವರಿ ತೆರವುಗೊಳಿಸದಂತೆ ತಿಳಿಸಿದ್ದಾರೆ.ಅರಣ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಿಲ್ಲಾಧಿಕಾರಿಗಳೊಂದಿಗೆ ಕುಳಿತು ಸಮಸ್ಯೆ ಬಗೆಹರಿಸಬೇಕು. ಏಕಾಏಕಿ ಯಾವುದೇ ಅರ್ಜಿಗಳನ್ನು ವಜಾಗೊಳಿಸದಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.ದಿಶಾ ಸಮಿತಿಗೆ ಗೈರು ಹಾಜರಾಗಿರುವ ತಹಶೀಲ್ದಾರ್‌ಗಳಿಗೆ ಶೋಕಾಸ್ ನೋಟೀಸ್ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel