#LoksabhaElection2024 | ಸಿದ್ದರಾಮಯ್ಯ, ಡಿಕೆಶಿಗೆ ಸೋನಿಯಾ ಗಾಂಧಿಯಿಂದ ಜವಾಬ್ದಾರಿ | ಬಿಜೆಪಿಗೂ ಕರ್ನಾಟಕವೇ ಟಾರ್ಗೆಟ್ |

July 19, 2023
11:51 AM
2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಗೆ ಕರ್ನಾಟಕವೇ ಮೊದಲ ಟಾರ್ಗೆಟ್. ರಾಜ್ಯದ ಎರಡೂ ಪ್ರಮುಖ ಪಕ್ಷದ ನಾಯಕರಿಗೆ ಹೈಕಮಾಂಡ್ ನಿಂದ ಟಾಸ್ಕ್ ಸಿಗುತ್ತಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದದ್ದು, ನಿರೀಕ್ಷೆ ಹುಟ್ಟಿಸಿದೆ. ಈಗ ಕಾಂಗ್ರೆಸ್ ಪಕ್ಷ ಎಲ್ಲಾ ತಮ್ಮ ಜವಾಬ್ದಾರಿಗಳನ್ನು ಕರ್ನಾಟಕ ನಾಯಕರ ಮೇಲೆ ಭರವಸೆ ಇಟ್ಟು ಅವರ ಪಾಲಿಗೆ ನೀಡುತ್ತಿದೆ. ಸೋಮವಾರ ಮತ್ತು ಮಂಗಳವಾರ ರಾಜಧಾನಿ ಬೆಂಗಳೂರಿನಲ್ಲಿ #Bengaluru ವಿರೋಧ ಪಕ್ಷಗಳ ಸಭೆ ನಡೆದಿತ್ತು. ಸಭೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ #SoniaGandhi  ಸಹ ಭಾಗಿಯಾಗಿದ್ದರು.

Advertisement
Advertisement

ಈ ವೇಳೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೋನಿಯಾ ಗಾಂಧಿ ಅವರು ಲೋಕಸಭಾ ಚುನಾವಣೆಯ ಟಾರ್ಗೆಟ್ ನೀಡಿದ್ದಾರೆ ಎಂದು ತಿಳಿದು ಬಂದಿದೆ. 2019ರ ಚುನಾವಣೆಯಲ್ಲಿ ಬಿಜೆಪಿ 25 ಕ್ಷೇತ್ರಗಳನ್ನ ಗೆದ್ದಿತ್ತು. ಕಾಂಗ್ರೆಸ್ ಒಂದರಲ್ಲಿ ಮಾತ್ರ ಗೆಲುವು ಕಂಡಿತ್ತು. ಈ ಬಾರಿ ರಾಜ್ಯದಲ್ಲಿ ಬಹುಮತದ ನಮ್ಮದೇ ಸರ್ಕಾರ ಇದೆ. ಹಾಗಾಗಿ 20ಕ್ಕೂ ಅಧಿಕ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವ ರೀತಿ ರಣನೀತಿ ರೂಪಿಸಿ ಎಂದು ಸೋನಿಯಾ ಗಾಂಧಿ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಸಭೆಯ ನಡುವೆಯೂ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಪ್ರತ್ಯೇಕವಾಗಿ ಸೋನಿಯಾ ಗಾಂಧಿ ಲೋಕಸಭಾ ಚುನಾವಣೆ ತಯಾರಿ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಲೋಕ ಸಮರದ ಟಾರ್ಗೆಟ್ ನೀಡಿದ್ದಾರೆ ಎಂದು ಹೇಳಲಾಗಿದೆ.

ಸೋನಿಯಾ ಗಾಂಧಿ ಸೂಚನೆ:ದಕ್ಷಿಣ ಭಾರತದ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಮಾತ್ರ ಹೆಚ್ಚು ಸ್ಥಾನ ಗೆಲ್ಲುವ ಅವಕಾಶವಿದೆ. ಉಳಿದ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಾಬಲ್ಯತೆ ಹೆಚ್ಚಿದೆ. ಕರ್ನಾಟಕದಲ್ಲಿ ನಮ್ಮದೇ ಸರ್ಕಾರವಿದ್ದು, ಗ್ಯಾರಂಟಿ ಯೋಜನೆಗಳನ್ನ ಪರಿಣಾಮಕಾರಿಯಾಗಿ ಜಾರಿಗೊಳಿಸಿ ಎಂದು ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಉತ್ತಮ ಆಡಳಿತ ನಡೆಸಿ ಮತಬ್ಯಾಂಕ್ ಗಟ್ಟಿಗೊಳಿಸಿಕೊಳ್ಳಿ. ಕರ್ನಾಟಕದಲ್ಲಿ 20 ಕ್ಷೇತ್ರ ಗೆಲ್ಲೋದು ಕಷ್ಟವಲ್ಲ. 20 ಸೀಟು ಗೆಲ್ಲಲು ಬೇಕಾದ ತಂತ್ರಗಾರಿಕೆ ಮಾಡಿ. ಚುನಾವಣೆ ಮತ್ತು ಪಕ್ಷಕ್ಕೆ ಸಂಬಂಧಿಸಿದ ಜವಾಬ್ದಾರಿಗಳನ್ನು ನಾಯಕರಿಗೆ ಹಂಚುವ ಪ್ರಕ್ರಿಯೆ ಆರಂಭಿಸಿ ಎಂದು ಸೂಚನೆ ನೀಡಿದ್ದಾರೆ .

Advertisement
ಬಿಜೆಪಿಗೂ ಕರ್ನಾಟಕವೇ ಟಾರ್ಗೆಟ್: ದಕ್ಷಿಣ ಭಾರತದಲ್ಲೂ ಬಿಜೆಪಿಗೂ ಕರ್ನಾಟಕ ಬಿಟ್ಟರೆ ಬೇರೆ ರಾಜ್ಯಗಳಲ್ಲಿ ಪ್ರಾಬಲ್ಯತೆ ಇಲ್ಲ. ವಿಧಾನಸಭೆ ಚುನಾವಣಾ ಸೋಲು ಬಿಜೆಪಿ ಹೈಕಮಾಂಡ್ ನಿದ್ದೆಗೆಡಿಸಿದೆ. ಕಾಂಗ್ರೆಸ್​ ಗ್ಯಾರಂಟಿಗಳ ಜನಪ್ರಿಯತೆ ನಡುವೆ 20 ಕ್ಷೇತ್ರದಲ್ಲಿ ಗೆಲ್ಲಲು ಬಿಜೆಪಿ ಸಹ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಕಳೆದ ಬಾರಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಚುನಾವಣೆ ಎದುರಿಸಿ 25 ಕ್ಷೇತ್ರಗಳನ್ನು ಬಿಜೆಪಿ ತನ್ನದಾಗಿಸಿಕೊಂಡಿತ್ತು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಯಡಿಯೂರಪ್ಪ ತೆರೆಯ ಹಿಂದೆ ಸರಿದಿದ್ದಾರೆ. ರಾಜ್ಯದ ಪ್ರಮುಖ ನಾಯಕರೆಲ್ಲಾ ಚುನಾವಣೆಯಲ್ಲಿ ಸೋತಿದ್ದಾರೆ.

ಉತ್ತಮ ಆಡಳಿತ ನಡೆಸಿ ಮತಬ್ಯಾಂಕ್ ಗಟ್ಟಿಗೊಳಿಸಿಕೊಳ್ಳಿ. ಕರ್ನಾಟಕದಲ್ಲಿ 20 ಕ್ಷೇತ್ರ ಗೆಲ್ಲೋದು ಕಷ್ಟವಲ್ಲ. 20 ಸೀಟು ಗೆಲ್ಲಲು ಬೇಕಾದ ತಂತ್ರಗಾರಿಕೆ ಮಾಡಿ. ಚುನಾವಣೆ ಮತ್ತು ಪಕ್ಷಕ್ಕೆ ಸಂಬಂಧಿಸಿದ ಜವಾಬ್ದಾರಿಗಳನ್ನು ನಾಯಕರಿಗೆ ಹಂಚುವ ಪ್ರಕ್ರಿಯೆ ಆರಂಭಿಸಿ ಎಂದು ಸೂಚನೆ ನೀಡಿದ್ದಾರೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಪಾರ ಏಕಾದಶಿಯ ನಾಲ್ಕು ಶುಭಯೋಗ | ಐದು ರಾಶಿಯವರಿಗೆ ವಿಷ್ಣುವಿನ ಅನುಗ್ರಹ ಪ್ರಾಪ್ತಿ
May 23, 2025
7:30 AM
by: ದ ರೂರಲ್ ಮಿರರ್.ಕಾಂ
ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ
May 22, 2025
10:48 PM
by: The Rural Mirror ಸುದ್ದಿಜಾಲ
ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ
May 22, 2025
10:27 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್
May 22, 2025
9:50 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group