ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದದ್ದು, ನಿರೀಕ್ಷೆ ಹುಟ್ಟಿಸಿದೆ. ಈಗ ಕಾಂಗ್ರೆಸ್ ಪಕ್ಷ ಎಲ್ಲಾ ತಮ್ಮ ಜವಾಬ್ದಾರಿಗಳನ್ನು ಕರ್ನಾಟಕ ನಾಯಕರ ಮೇಲೆ ಭರವಸೆ ಇಟ್ಟು ಅವರ ಪಾಲಿಗೆ ನೀಡುತ್ತಿದೆ. ಸೋಮವಾರ ಮತ್ತು ಮಂಗಳವಾರ ರಾಜಧಾನಿ ಬೆಂಗಳೂರಿನಲ್ಲಿ #Bengaluru ವಿರೋಧ ಪಕ್ಷಗಳ ಸಭೆ ನಡೆದಿತ್ತು. ಸಭೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ #SoniaGandhi ಸಹ ಭಾಗಿಯಾಗಿದ್ದರು.
ಈ ವೇಳೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೋನಿಯಾ ಗಾಂಧಿ ಅವರು ಲೋಕಸಭಾ ಚುನಾವಣೆಯ ಟಾರ್ಗೆಟ್ ನೀಡಿದ್ದಾರೆ ಎಂದು ತಿಳಿದು ಬಂದಿದೆ. 2019ರ ಚುನಾವಣೆಯಲ್ಲಿ ಬಿಜೆಪಿ 25 ಕ್ಷೇತ್ರಗಳನ್ನ ಗೆದ್ದಿತ್ತು. ಕಾಂಗ್ರೆಸ್ ಒಂದರಲ್ಲಿ ಮಾತ್ರ ಗೆಲುವು ಕಂಡಿತ್ತು. ಈ ಬಾರಿ ರಾಜ್ಯದಲ್ಲಿ ಬಹುಮತದ ನಮ್ಮದೇ ಸರ್ಕಾರ ಇದೆ. ಹಾಗಾಗಿ 20ಕ್ಕೂ ಅಧಿಕ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವ ರೀತಿ ರಣನೀತಿ ರೂಪಿಸಿ ಎಂದು ಸೋನಿಯಾ ಗಾಂಧಿ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಸಭೆಯ ನಡುವೆಯೂ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಪ್ರತ್ಯೇಕವಾಗಿ ಸೋನಿಯಾ ಗಾಂಧಿ ಲೋಕಸಭಾ ಚುನಾವಣೆ ತಯಾರಿ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಲೋಕ ಸಮರದ ಟಾರ್ಗೆಟ್ ನೀಡಿದ್ದಾರೆ ಎಂದು ಹೇಳಲಾಗಿದೆ.
ಸೋನಿಯಾ ಗಾಂಧಿ ಸೂಚನೆ:ದಕ್ಷಿಣ ಭಾರತದ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಮಾತ್ರ ಹೆಚ್ಚು ಸ್ಥಾನ ಗೆಲ್ಲುವ ಅವಕಾಶವಿದೆ. ಉಳಿದ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಾಬಲ್ಯತೆ ಹೆಚ್ಚಿದೆ. ಕರ್ನಾಟಕದಲ್ಲಿ ನಮ್ಮದೇ ಸರ್ಕಾರವಿದ್ದು, ಗ್ಯಾರಂಟಿ ಯೋಜನೆಗಳನ್ನ ಪರಿಣಾಮಕಾರಿಯಾಗಿ ಜಾರಿಗೊಳಿಸಿ ಎಂದು ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಉತ್ತಮ ಆಡಳಿತ ನಡೆಸಿ ಮತಬ್ಯಾಂಕ್ ಗಟ್ಟಿಗೊಳಿಸಿಕೊಳ್ಳಿ. ಕರ್ನಾಟಕದಲ್ಲಿ 20 ಕ್ಷೇತ್ರ ಗೆಲ್ಲೋದು ಕಷ್ಟವಲ್ಲ. 20 ಸೀಟು ಗೆಲ್ಲಲು ಬೇಕಾದ ತಂತ್ರಗಾರಿಕೆ ಮಾಡಿ. ಚುನಾವಣೆ ಮತ್ತು ಪಕ್ಷಕ್ಕೆ ಸಂಬಂಧಿಸಿದ ಜವಾಬ್ದಾರಿಗಳನ್ನು ನಾಯಕರಿಗೆ ಹಂಚುವ ಪ್ರಕ್ರಿಯೆ ಆರಂಭಿಸಿ ಎಂದು ಸೂಚನೆ ನೀಡಿದ್ದಾರೆ .
ಕಳೆದ ಬಾರಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಚುನಾವಣೆ ಎದುರಿಸಿ 25 ಕ್ಷೇತ್ರಗಳನ್ನು ಬಿಜೆಪಿ ತನ್ನದಾಗಿಸಿಕೊಂಡಿತ್ತು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಯಡಿಯೂರಪ್ಪ ತೆರೆಯ ಹಿಂದೆ ಸರಿದಿದ್ದಾರೆ. ರಾಜ್ಯದ ಪ್ರಮುಖ ನಾಯಕರೆಲ್ಲಾ ಚುನಾವಣೆಯಲ್ಲಿ ಸೋತಿದ್ದಾರೆ.
ಉತ್ತಮ ಆಡಳಿತ ನಡೆಸಿ ಮತಬ್ಯಾಂಕ್ ಗಟ್ಟಿಗೊಳಿಸಿಕೊಳ್ಳಿ. ಕರ್ನಾಟಕದಲ್ಲಿ 20 ಕ್ಷೇತ್ರ ಗೆಲ್ಲೋದು ಕಷ್ಟವಲ್ಲ. 20 ಸೀಟು ಗೆಲ್ಲಲು ಬೇಕಾದ ತಂತ್ರಗಾರಿಕೆ ಮಾಡಿ. ಚುನಾವಣೆ ಮತ್ತು ಪಕ್ಷಕ್ಕೆ ಸಂಬಂಧಿಸಿದ ಜವಾಬ್ದಾರಿಗಳನ್ನು ನಾಯಕರಿಗೆ ಹಂಚುವ ಪ್ರಕ್ರಿಯೆ ಆರಂಭಿಸಿ ಎಂದು ಸೂಚನೆ ನೀಡಿದ್ದಾರೆ.
ಹಿಂದೂ ಧರ್ಮದ ವಿಶೇಷತೆ ಎಂದರೆ ಅದು ಸ್ವ ವಿಮರ್ಶೆಯ (self -criticism) ಸ್ವಾತಂತ್ರ್ಯ…
ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಮೇ 9…
ಮುಳಿಯ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಕೃಷಿ ಬೆಳವಣಿಗೆಗೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ಎಲ್ಲಾ…
ರಾಜ್ಯದ 6 ಜಿಲ್ಲೆಗಳಲ್ಲಿ ತೋಟಗಾರಿಕಾ ಬೆಳೆಗಳಿಗೆ ಅನುಕೂಲವಾಗುವಂತೆ ಶೀಥಲೀಕರಣ ಘಟಕಗಳನ್ನು ನಿರ್ಮಿಸಲಾಗುತ್ತಿದೆ ಎಂದು…