“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

May 18, 2026
10:14 PM
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD ತಿಳಿಸಿದೆ. ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ನೈರುತ್ಯ ಮುಂಗಾರು ಈ ತಿಂಗಳ 26 ರಂದು ಕೇರಳಕ್ಕೆ ಅಪ್ಪಳಿಸುವ ಸಾಧ್ಯತೆ ಇದ್ದು, ಸಾಮಾನ್ಯವಾಗಿ ಜೂನ್ 1 ರಂದು ಆರಂಭವಾಗುವ ಮುಂಗಾರು ಈ ಬಾರಿ 6 ದಿನ ಮುಂಚಿತವಾಗಿಯೇ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಮುಂದಿನ ಎರಡು-ಮೂರು ದಿನಗಳಲ್ಲಿ ಆಗ್ನೇಯ ಅರೇಬಿಯನ್ ಸಮುದ್ರ, ಬಂಗಾಳಕೊಲ್ಲಿ, ಅಂಡಮಾನ್ ದ್ವೀಪಗಳು ಹಾಗೂ ಅಂಡಮಾನ್ ಸಮುದ್ರದ ಹೆಚ್ಚಿನ ಭಾಗಗಳತ್ತ ನೈರುತ್ಯ ಮುಂಗಾರು ಮತ್ತಷ್ಟು ಚುರುಕುಗೊಳ್ಳುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲೂ ಮಳೆ ಚಟುವಟಿಕೆಗಳು ವೇಗ ಪಡೆಯುತ್ತಿದ್ದು, ಕರಾವಳಿ ಕರ್ನಾಟಕದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಕರಾವಳಿಯ ಬಹುತೇಕ ಭಾಗಗಳಲ್ಲಿ, ದಕ್ಷಿಣ ಒಳನಾಡಿನ ಹಲವೆಡೆ ಹಾಗೂ ಉತ್ತರ ಒಳನಾಡಿನ ಕೆಲವೆಡೆ ನಿನ್ನೆ ಮಳೆಯಾಗಿದೆ.

ವಿಶೇಷವಾಗಿ ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಭಾರೀ ಗಾಳಿ, ಮಿಂಚು ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಮುಂಗಾರು ಮುಂಚಿತ ಆಗಮನದಿಂದ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ಸಿಗುವ ನಿರೀಕ್ಷೆ ಇದ್ದರೂ, ಗುಡುಗು-ಸಿಡಿಲು ಹಾಗೂ ಭಾರೀ ಗಾಳಿಯಿಂದ ಸಾರ್ವಜನಿಕರು ಮತ್ತು ರೈತರು ಎಚ್ಚರಿಕೆಯಿಂದಿರಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ.

The India Meteorological Department has predicted that the southwest monsoon may reach Kerala by May 26, six days earlier than normal. Heavy rain is likely in coastal Karnataka, and fishermen have been warned not to venture into the sea due to rough weather conditions.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ
August 30, 2026
10:38 PM
by: ದ ರೂರಲ್ ಮಿರರ್.ಕಾಂ
ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ
August 30, 2026
10:18 PM
by: ದ ರೂರಲ್ ಮಿರರ್.ಕಾಂ
ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ
August 30, 2026
10:09 PM
by: ದ ರೂರಲ್ ಮಿರರ್.ಕಾಂ
ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?
August 30, 2026
11:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror