ಕೇರಳದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆ | ಎರ್ನಾಕುಲಂ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್|

June 2, 2024
8:34 PM
ಕೇರಳದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಮುಂಗಾರು ಕೇರಳ ಪ್ರವೇಶಿಸಿದ ಬಳಿಕ ಇದೀಗ ಬಿರುಸಿನಿಂದ ಸಾಗುತ್ತಿದೆ.

ಮುಂಗಾರು ಮಳೆ ಕೇರಳದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಎರ್ನಾಕುಲಂ ಜಿಲ್ಲೆಯ ಸಹಿತ ವಿವಿಧ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಕಳೆದ ಹಲವು ದಿನಗಳಿಂದ ಕೇರಳದ ವಿವಿದಡೆ ನಿರಂತರ ಮಳೆಯಾಗುತ್ತಿದೆ.ಮುಂದಿನ  2-3 ದಿನಗಳಲ್ಲಿ ಕೇರಳ ಜಿಲ್ಲೆಯ  ಕೆಲವು ಸ್ಥಳಗಳಲ್ಲಿ “ಭಾರೀ ಮಳೆ”ಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಪತ್ತನಂತಿಟ್ಟ, ಆಲಪ್ಪುಳ, ಇಡುಕ್ಕಿ ಮತ್ತು ವಯನಾಡ್ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕೋಝಿಕ್ಕೋಡ್, ಮಲಪ್ಪುರಂ ಮತ್ತು ಪಾಲಕ್ಕಾಡ್ ಜಿಲ್ಲೆಗಳಲ್ಲಿ ಲಘು ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹವಾಮಾನ ಮುನ್ಸೂಚನೆಯನ್ನು ಗಮನದಲ್ಲಿರಿಸಿಕೊಂಡು  ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ ಮತ್ತು ಮಣ್ಣಿನ ಕುಸಿತದ ಬಗ್ಗೆ ಜನರನ್ನು ಎಚ್ಚರಿಸಿದೆ ಮತ್ತು ಅಗತ್ಯವಿದ್ದಲ್ಲಿ ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಮನವಿ ಮಾಡಿದೆ. ಗುಡ್ಡಗಾಡು ಪ್ರದೇಶಗಳ ಮೂಲಕ ರಾತ್ರಿ ಪ್ರಯಾಣವನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜೂ.3  ಕಣ್ಣೂರು, ಜೂ.4 ತ್ರಿಶೂರ್‌, ಜೂ.5 ಎರ್ನಾಕುಳಂ, ಇಡುಕ್ಕಿ , ಜೂ.6  ಕಾಸರಗೋಡುವರೆಗಿನ ಕರಾವಳಿ ತೀರ ಪ್ರದೇಶದಲ್ಲಿ ಎಲ್ಲೋ ಎಲರ್ಟ್‌ ಘೋಷಣೆ ಮಾಡಲಾಗಿದೆ.

Due to the southwest monsoon causing widespread rainfall across Kerala, the India Meteorological Department (IMD) issued an orange alert for Ernakulam district on Sunday, following days of continuous heavy rains in the area.


Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ
July 26, 2026
3:04 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ
July 26, 2026
2:49 PM
by: ಸಾಯಿಶೇಖರ್ ಕರಿಕಳ
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror