ಬಿತ್ತನೆ ಬೀಜದ ದರಗಳು ಗಣನೀಯವಾಗಿ ಏರಿಕೆ | ಉಳಿದ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಬೀಜಗಳ ದರ ಕಡಿಮೆ | ಸಿಎಂ ಸಿದ್ದರಾಮಯ್ಯ

May 28, 2024
10:01 PM

ಹವಾಮಾನ ವೈಪರಿತ್ಯ(Climate change), ಮಳೆ ಕೊರತೆ(Lack of rain), ಬರಗಾಲ(Drought), ತಾಪಮಾನ ಏರಿಕೆ(Temperature hike) ಇವೆಲ್ಲವೂ ಜನ ಜೀವನದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಅದರಲ್ಲೂ ಕೃಷಿ ಚಟುವಟಿಕೆ(Agriculture) ಮೇಲೆ ಇದರ ಪರಿಣಾಮ ಜಾಸ್ತಿ ಎಂದೇ ಹೇಳಬಹುದು. 2023 – 24ನೇ ಸಾಲಿನ ಭೀಕರ ಬರಗಾಲದಿಂದಾಗಿ ರಾಜ್ಯದಲ್ಲಿ ಬೀಜೋತ್ಪಾದನೆ(Seed production) ಗಣನೀಯವಾಗಿ ಕುಂಠಿತವಾಗಿದ್ದು, ಬೀಜೋತ್ಪಾದಕರಿಂದ ಖರೀದಿಸುವ ಬಿತ್ತನೆ ಬೀಜದ ದರಗಳು ಸಹ ಗಣನೀಯವಾಗಿ ಏರಿಕೆಯಾಗಿದೆ(Seeds Price Hike). ಈ ಹಿನ್ನೆಲೆಯಲ್ಲಿ ಬಿತ್ತನೆ ಬೀಜದ ಮಾರಾಟದ ದರ ಏರಿಕೆಯಾಗಿದೆ. ಈ ದರ ಏರಿಕೆ ಮುಂಗಾರು ಬೆಳೆ ಬೆಳೆಯುವ ಎಲ್ಲ ರಾಜ್ಯಗಳಲ್ಲಿಯೂ ಆಗಿದೆ. ಉಳಿದ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಬೀಜಗಳ ದರ ಕಡಿಮೆ ಇದೆ ಎಂದು ಸಿಎಂ ಸಿದ್ದರಾಮಯ್ಯ(CM Siddaramiah) ಹೇಳಿದ್ದಾರೆ.

Advertisement
Advertisement

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ, ಬಿತ್ತನೆ ಬೀಜಗಳ ಮಾರಾಟ ದರಗಳನ್ನು ನಿಗದಿಪಡಿಸುವ ಸಂದರ್ಭಗಳಲ್ಲಿ ಬಿತ್ತನೆ ಬೀಜ ಖರೀದಿ ದರಗಳು ಹಾಗೂ ಗರಿಷ್ಠ APMC ಮಾರಾಟ ದರಗಳನ್ನು ಪರಿಗಣಿಸಲಾಗುತ್ತದೆ. 2022-23ನೇ ಸಾಲಿಗೆ ಹೋಲಿಸಿದಾಗ 2023-24ನೇ ಸಾಲಿನಲ್ಲಿ ವಿವಿಧ ಬೆಳೆಗಳ ಖರೀದಿ ದರಗಳಲ್ಲಿ (Procurement Rates) ಗರಿಷ್ಠ ಶೇ.59.58ರಷ್ಟು ವ್ಯತ್ಯಾಸವಾಗಿರುತ್ತದೆ. ರೈತರು ತಮ್ಮ ಜಮೀನಿನಲ್ಲಿಯೇ ಬೀಜಗಳನ್ನು ಉತ್ಪಾದನೆ ಮಾಡುತ್ತಾರೆ. ಇದನ್ನು ಕರ್ನಾಟಕ ರಾಜ್ಯ ಬೀಜ ನಿಗಮ ನಿ., ರಾಷ್ಟ್ರೀಯ ರಾಜ್ಯ ಬೀಜ ನಿ., ಕರ್ನಾಟಕ ಎಣ್ಣೆಬೀಜ ಬೆಳೆಗಾರರ ಮಹಾ ಮಂಡಳಿ ಹಾಗೂ ಖಾಸಗಿ ಸಂಸ್ಥೆಗಳು ಕೈಗೊಂಡು ಸರಬರಾಜು ಮಾಡುತ್ತವೆ ಎಂದು ತಿಳಿಸಿದ್ದಾರೆ.

Advertisement

ಈ ಬಾರಿ ಹೆಸರು ಬೆಳೆಯ ಬಿತ್ತನೆ ಬೀಜಗಳ ಎಲ್‌-1 ದರವು ಶೇ.48.5, ಉದ್ದು ಬೆಳೆಯ ದರವು ಶೇ.37.72, ತೊಗರಿ ಬೆಳೆಯ ವಿವಿಧ ತಳಿಗಳ ಬಿತ್ತನೆ ಬೀಜಗಳ ದರದಲ್ಲಿ ಶೇ.28.29 ರಿಂದ 37.69ರಷ್ಟು ಮತ್ತು ಜೋಳದ ಬೆಳೆಯ ಎಲ್‌-1 ದರವು ಶೇ.7.66 ರಿಂದ ಶೇ.33.33ರಷ್ಟು ಹೆಚ್ಚಾಗಿರುತ್ತದೆ. ಬೀಜಗಳ ಖರೀದಿ ದರದಲ್ಲಿನ ಹೆಚ್ಚಳದ ಮೊತ್ತವು ಬೀಜೋತ್ಪಾದನೆಯಲ್ಲಿ ತೊಡಗಿರುವ ರೈತರಿಗೆ ವರ್ಗಾವಣೆಯಾಗಿರುತ್ತದೆ ಎಂದಿದ್ದಾರೆ.

ಅಲ್ಲದೇ ಕೆಲ ಬಿತ್ತನೆ ಬೀಜದ ದರದಲ್ಲಿ ಇಳಿಕೆ ಹಾಗೂ ಯಥಾಸ್ಥಿತಿ ಕೂಡ ಕಂಡುಬಂದಿದೆ. 2024ರ ಮುಂಗಾರು ಹಂಗಾಮಿನ ಸೋಯಾ ಅವರೆ ಬಿತ್ತನೆ ಬೀಜದ ದರವು 2023ರ ಮುಂಗಾರು ಹಂಗಾಮಿನ ಎಲ್‌-1 ದರಗಳ ಹೋಲಿಕೆಯಲ್ಲಿ ಶೇ.8ರಷ್ಟು ಕಡಿತಗೊಂಡಿರುತ್ತದೆ. ಸೂರ್ಯಕಾಂತಿ ಬಿತ್ತನೆ ಬೀಜದ ದರ ಕಳೆದ ಸಾಲಿನಷ್ಟೇ ಇದ್ದು, ಯಾವುದೇ ಬದಲಾವಣೆ ಇರುವುದಿಲ್ಲ. ಬಿ.ಟಿ. ಹತ್ತಿ ಬಿತ್ತನೆ ಬೀಜಗಳನ್ನು ರಾಜ್ಯ ಸರ್ಕಾರದ ಇಲಾಖಾ ವತಿಯಿಂದ ರಿಯಾಯತಿ ದರದಲ್ಲಿ ವಿತರಣೆ ಮಾಡುತ್ತಿರುವುದಿಲ್ಲ. ಬಿ.ಟಿ. ಹತ್ತಿ ಬಿತ್ತನೆ ಬೀಜಗಳ ಗರಿಷ್ಠ ದರಗಳನ್ನು ಕೇಂದ್ರ ಸರ್ಕಾರದ ವತಿಯಿಂದಲೇ ನಿಗದಿಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

Advertisement

ದರ ಹೋಲಿಕೆ: ರಾಜ್ಯದಲ್ಲಿನ ವಿವಿಧ ಬೆಳೆಗಳ ಬಿತ್ತನೆ ಬೀಜಗಳಲ್ಲಿನ ದರ ವ್ಯತ್ಯಾಸವು 2023ರ ಹೋಲಿಕೆಯಲ್ಲಿ ಈ ಬಾರಿ ಗರಿಷ್ಠ ಶೇ.48.50ರಷ್ಟಿದೆ. ಆದಾಗ್ಯೂ, ನೆರೆಯ ರಾಜ್ಯಗಳಲ್ಲಿನ ಪ್ರಸಕ್ತ ಸಾಲಿನ ಬಿತ್ತನೆ ಬೀಜಗಳ ದರಗಳ ಏರಿಕೆಯ ಹೋಲಿಕೆಯಲ್ಲಿ ರಾಜ್ಯದಲ್ಲಿನ ಬಿತ್ತನೆ ಬೀಜಗಳ ದರದ ಏರಿಕೆಯು ಕಡಿಮೆಯಾಗಿರುತ್ತದೆ. ಉದಾಹರಣೆಗೆ ಮಹಾರಾಷ್ಟ್ರದಲ್ಲಿ ಸೋಯಾ ಅವರೆ ಬೆಳೆಗೆ ಪ್ರತಿ ಕ್ವಿಂಟಾಲ್‌ಗೆ ಎಲ್‌-1 ದರವು ರೂ.8500 ನಿಗದಿಯಾಗಿದ್ದು ಕರ್ನಾಟಕದಲ್ಲಿ ಇದು ರೂ.7270 ನಿಗದಿಯಾಗಿದೆ. ಅದೇ ರೀತಿ, ತೊಗರಿ ಬೆಳೆಗೆ ಮಹಾರಾಷ್ಟ್ರದಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.25,000 ಇದ್ದು ಕರ್ನಾಟಕದಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.17,900 ಇದೆ. ಹೆಸರು ಮತ್ತು ಜೋಳದ ಬೆಳೆಗೆ ಪ್ರತಿ ಕ್ವಿಂಟಾಲ್‌ಗೆ ಮಹಾರಾಷ್ಟ್ರದಲ್ಲಿ ಕ್ರಮವಾಗಿ ರೂ.23,500 ರೂ., ರೂ.14,000 ಇದ್ದು, ಕರ್ನಾಟಕದಲ್ಲಿ ಕ್ರಮವಾಗಿ ರೂ.18,600 ಮತ್ತು ರೂ.12,500 ನಿಗದಿಪಡಿಸಲಾಗಿದೆ. ಈ ಹೋಲಿಕೆಯಲ್ಲಿ ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ವಿವಿಧ ಬೆಳೆಗಳ ಬಿತ್ತನೆ ಬೀಜಗಳ ದರಗಳು ಗಣನೀಯವಾಗಿ ಕಡಿಮೆ ಇದೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯು ಉತ್ತಮವಾಗಿ ಆಗುತ್ತಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ. ಇದೇ ವೇಳೆ, ಬಿತ್ತನೆ ಬೀಜಗಳ ದರಗಳು ಏರಿಕೆಯಾಗಿರುವ ಬಗ್ಗೆ ವಿವಿಧ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು, ಈ ಕುರಿತು ಕೃಷಿ ಇಲಾಖೆಯು ಸ್ಪಷ್ಟೀಕರಣ ನೀಡಿದ್ದು ವಾಸ್ತವ ಸ್ಥಿತಿಯನ್ನು ವಿವರಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Advertisement
  • ಅಂತರ್ಜಾಲ ಮಾಹಿತಿ
ಪ್ರತಿಕ್ರಿಯಿಸಲು....
ಈ ಕೆಳಗಿನ ಲಿಂಕ್‌ ಮೂಲಕ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು…

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಭಾರತ ಬದ್ಧವಾಗಿದೆ
September 14, 2024
2:25 PM
by: ದ ರೂರಲ್ ಮಿರರ್.ಕಾಂ
ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ | ಕೇಂದ್ರ ಸಚಿವ ಸಂಪುಟ ಅನುಮೋದನೆ
September 14, 2024
12:16 PM
by: ದ ರೂರಲ್ ಮಿರರ್.ಕಾಂ
ಹಬ್ಬದ ಸಮಯದಲ್ಲಿ ಆಹಾರ ಕಲಬೆರಕೆಯಾಗದಂತೆ ತಪಾಸಣೆಗೆ ಸೂಚನೆ
September 14, 2024
11:50 AM
by: ದ ರೂರಲ್ ಮಿರರ್.ಕಾಂ
ಹಸಿರು ಜಲಜನಕ – 2024 ಅಂತಾರಾಷ್ಟ್ರೀಯ ಸಮಾವೇಶ | ಇಂಗಾಲ ಹೊರಸೂಸುವಿಕೆ ಕಡಿಮೆ ಮಾಡಲು ಗುರಿ
September 13, 2024
9:57 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror