ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು, ರೈತರಿಗೆ ವಿತರಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಜಂಟಿ ಕೃಷಿ ನಿರ್ದೇಶಕಿ ಹೆಚ್.ಎಲ್.ಸುಜಾತ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಅವರು, ಈಗಾಗಲೇ ಪೂರ್ವ ಮುಂಗಾರು ಬೆಳೆಗಳಾದ ಹೆಸರು, ಉದ್ದು, ಅಲಸಂದೆ, ನೆಲಗಡಲೆ, ಸೂರ್ಯಕಾಂತಿ ಬೆಳೆಗಳು ಸೇರಿದಂತೆ ರೈತರಿಗೆ ಬಿತ್ತನೆಗೆ ಬೇಕಾಗುವ ಬಿತ್ತನೆ ಬೀಜವನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನಿಡಲಾಗಿದೆ. ರೈತರಿಗೆ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಏಪ್ರಿಲ್ ಹಾಗೂ ಮೇ ತಿಂಗಳ ರಸಗೊಬ್ಬರ ಬೇಡಿಕೆಯು 37237 ಮೆಟ್ರಿಕ್ ಟನ್ ಆಗಿದ್ದು, ಜಿಲ್ಲೆಯಲ್ಲಿ ಈಗಾಗಲೇ 41151 ಮೆಟ್ರಿಕ್ ಟನ್‌ನಷ್ಟು ದಾಸ್ತಾನು ಇದೆ ಎಂದು ಅವರು ತಿಳಿಸಿದ್ದಾರೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel