ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ

May 22, 2025
10:27 PM

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು, ರೈತರಿಗೆ ವಿತರಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಜಂಟಿ ಕೃಷಿ ನಿರ್ದೇಶಕಿ ಹೆಚ್.ಎಲ್.ಸುಜಾತ ತಿಳಿಸಿದ್ದಾರೆ.  ಈ ಕುರಿತು ಮಾಹಿತಿ ನೀಡಿದ ಅವರು, ಈಗಾಗಲೇ ಪೂರ್ವ ಮುಂಗಾರು ಬೆಳೆಗಳಾದ ಹೆಸರು, ಉದ್ದು, ಅಲಸಂದೆ, ನೆಲಗಡಲೆ, ಸೂರ್ಯಕಾಂತಿ ಬೆಳೆಗಳು ಸೇರಿದಂತೆ ರೈತರಿಗೆ ಬಿತ್ತನೆಗೆ ಬೇಕಾಗುವ ಬಿತ್ತನೆ ಬೀಜವನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನಿಡಲಾಗಿದೆ. ರೈತರಿಗೆ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.  ಏಪ್ರಿಲ್ ಹಾಗೂ ಮೇ ತಿಂಗಳ ರಸಗೊಬ್ಬರ ಬೇಡಿಕೆಯು 37237  ಮೆಟ್ರಿಕ್ ಟನ್ ಆಗಿದ್ದು, ಜಿಲ್ಲೆಯಲ್ಲಿ ಈಗಾಗಲೇ 41151 ಮೆಟ್ರಿಕ್ ಟನ್‌ನಷ್ಟು ದಾಸ್ತಾನು ಇದೆ ಎಂದು ಅವರು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ
September 2, 2026
2:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror