Advertisement
ಸುದ್ದಿಗಳು

ಸ್ಪೇನ್‌ನಲ್ಲಿ ಭೀಕರ ಕಾಡ್ಗಿಚ್ಚು | ಕಿತ್ತಳೆ ಬಣ್ಣಕ್ಕೆ ತಿರುಗಿದ ಆಕಾಶ, ಭೀಕರ ಕಾಡ್ಗಿಚ್ಚಿಗೆ 12 ಬಲಿ- ಸ್ಪೇನ್‌ನಲ್ಲಿ ಭಯಾನಕ ದುರಂತ

Share

ದಕ್ಷಿಣ ಸ್ಪೇನ್‌ನ ಅಲ್ಮೇರಿಯಾ (Almería) ಪ್ರಾಂತ್ಯದಲ್ಲಿ ಸಂಭವಿಸಿರುವ ಭೀಕರ ಕಾಡ್ಗಿಚ್ಚಿನಲ್ಲಿ ಕನಿಷ್ಠ 12 ಮಂದಿ ಮೃತಪಟ್ಟಿದ್ದು, 23ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ತೀವ್ರ ಬಿಸಿಲು, ಒಣ ಹವಾಮಾನ ಮತ್ತು ಬಲವಾದ ಗಾಳಿಯಿಂದ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿ, ಆಕಾಶವೇ ಕಿತ್ತಳೆ ಬಣ್ಣಕ್ಕೆ ತಿರುಗುವಷ್ಟು ದಟ್ಟ ಹೊಗೆ ಆವರಿಸಿದೆ.

ಅಧಿಕಾರಿಗಳ ಮಾಹಿತಿ ಪ್ರಕಾರ, ಹಲವರು ವಾಹನಗಳಲ್ಲಿ ಹಾಗೂ ಕಾಲ್ನಡಿಗೆಯಲ್ಲಿ ತಪ್ಪಿಸಿಕೊಳ್ಳಲು ಯತ್ನಿಸುವಾಗ ಬೆಂಕಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಸುಮಾರು 800 ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದ್ದು, 150ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿ ಹಾಗೂ ಸೇನಾ ತುರ್ತು ಪಡೆಗಳು ಬೆಂಕಿಯನ್ನು ನಿಯಂತ್ರಿಸಲು ಹೋರಾಟ ನಡೆಸುತ್ತಿವೆ.

ಪ್ರಾಥಮಿಕ ತನಿಖೆಯ ಪ್ರಕಾರ, ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದು ಬೆಂಕಿಗೆ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ. ಆದರೆ ತೀವ್ರ ಬಿಸಿಗಾಳಿ ಮತ್ತು ಒಣಗಿದ ಸಸ್ಯವರ್ಗದಿಂದ ಬೆಂಕಿ ಅತ್ಯಂತ ವೇಗವಾಗಿ ಹರಡಿದೆ. ಅಧಿಕಾರಿಗಳು ಅಧಿಕೃತ ಸ್ಥಳಾಂತರ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ವಿಜ್ಞಾನಿಗಳ ಪ್ರಕಾರ, ಯುರೋಪಿನಲ್ಲಿ ಹೆಚ್ಚುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯಿಂದ ಕಾಡ್ಗಿಚ್ಚಿನ ಪ್ರಮಾಣ ಹಾಗೂ ತೀವ್ರತೆ ಹೆಚ್ಚುತ್ತಿದ್ದು, ಇಂತಹ ದುರಂತಗಳು ಮುಂದಿನ ದಿನಗಳಲ್ಲಿ ಮತ್ತಷ್ಟು ಸವಾಲಾಗಿ ಪರಿಣಮಿಸುವ ಸಾಧ್ಯತೆಯಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ನಿಮ್ಮ ಅಭಿಪ್ರಾಯ, ಪ್ರತಿಕ್ರಿಯೆಗಳನ್ನು ಕಮೆಂಟ್‌ ಮೂಲಕ ತಿಳಿಸಿ…

A massive wildfire in Spain’s Almería province has killed at least 12 people, left 23 missing, and forced the evacuation of hundreds. Extreme heat, dry vegetation, and strong winds fueled the blaze, turning the sky orange with thick smoke.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

5 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

17 hours ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

1 day ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

1 day ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

2 days ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

2 days ago