ಹೈನುಗಾರಿಕೆ ಅಭಿವೃದ್ಧಿಗೆ ಧರ್ಮಸ್ಥಳದಿಂದ ವಿಶೇಷ ನೆರವು | ದ ಕ ಜಿಲ್ಲೆಯಲ್ಲಿ ಒಂದು ಲಕ್ಷ ಲೀಟರ್ ಹಾಲಿನ ಕೊರತೆ‌ ಇದೆ |

September 13, 2023
9:34 PM
ದ ಕ ಜಿಲ್ಲೆಯಲ್ಲಿ 398  ಹಾಲು ಉತ್ಪಾದಕರ ಸಹಕಾರಿ ಸಂಘಗಳಿದ್ದು ದಿನಕ್ಕೆ 2.5 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಇನ್ನೂ ಒಂದು ಲಕ್ಷ ಲೀ. ಹಾಲಿನ ಕೊರತೆ ಇದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ದ.ಕ. ಜಿಲ್ಲಾ ಉಪನಿರ್ದೇಶಕ ಡಾ. ಅರುಣ್‌ಕುಮಾರ್ ಹೇಳಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹೈನುಗಾರಿಕೆ ಅಭಿವೃದ್ಧಿಗೆ ವಿಶೇಷ ನೆರವು, ಪ್ರೋತ್ಸಾಹ ಮತ್ತು ಮಾರ್ಗದರ್ಶನ ನೀಡಲಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಬುಧವಾರ ಧರ್ಮಸ್ಥಳದಲ್ಲಿ ಗ್ರಾಮಾಭಿವೃದ್ಧಿ ವಿಭಾಗದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ 9 ತಾಲ್ಲೂಕುಗಳಿಗೆ ತಲಾ 5 ರಂತೆ ಒಟ್ಟು 45 ದ್ರವಸಾರಜನಕ ಜಾಡಿಗಳನ್ನು ವಿತರಿಸಿ ಮಾತನಾಡಿದರು. ರೈತರಿಗೆ ನಿತ್ಯ ಆದಾಯ ಕೊಡುವ ಹಾಲು, ಹಣ್ಣು ಮತ್ತು ಹೂವಿನ ಗಿಡಗಳ ಬೆಳವಣಿಗೆ ಪ್ರೋತ್ಸಾಹ ನೀಡಲಾಗುತ್ತದೆ. ತಮ್ಮ ಸಂಸದರ ನಿಧಿಯಿಂದ ಬೀದರ್ ಜಿಲ್ಲೆಯಲ್ಲಿ ಹೈನುಗಾರಿಕೆ ಅಭಿವೃದ್ಧಿಗೆ 2 ಕೋಟಿ 45 ಲಕ್ಷ ರೂ. ಅನುದಾನ ನೀಡಲಾಗಿದೆ ಎಂದು ಹೇಳಿದರು.

ಅಧಿಕ ಆದಾಯ ಪಡೆಯಲು ರೈತರಿಗೆ ಹೈನುಗಾರಿಕೆ ಅನಿವಾರ್ಯ. ಧರ್ಮಸ್ಥಳದಿಂದಾಗಿ ಇಡಿ ರಾಜ್ಯದಲ್ಲಿ ಹಾಲು ಉತ್ಪಾದನೆಯಲ್ಲಿ ಕ್ರಾಂತಿಕಾರಿ ಸುಧಾರಣೆಯಾಗಿದೆ. ದೇಶೀತಳಿ, ಮಿಶ್ರತಳಿ ಅಭಿವೃದ್ಧಿ ಮತ್ತು ಆಧುನಿಕ ತಂತ್ರಜ್ಞಾನ ಬಳಕೆಯಿಂದ ಹೈನುಗಾರಿಕೆಯಲ್ಲಿ ಹೆಚ್ಚು ಲಾಭ ಪಡೆಯಬಹುದು ಎಂದು ಹೆಗ್ಗಡೆಯವರು ಹೇಳಿದರು.

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ದ.ಕ. ಜಿಲ್ಲಾ ಉಪನಿರ್ದೇಶಕ ಡಾ. ಅರುಣ್‌ಕುಮಾರ್ ಮಾತನಾಡಿ, ದ ಕ ಜಿಲ್ಲೆಯಲ್ಲಿ 398  ಹಾಲು ಉತ್ಪಾದಕರ ಸಹಕಾರಿ ಸಂಘಗಳಿದ್ದು ದಿನಕ್ಕೆ 2.5 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಇನ್ನೂ ಒಂದು ಲಕ್ಷ ಲೀ. ಹಾಲಿನ ಕೊರತೆ ಇದೆ.ಹೈನುಗಾರಿಕೆಯಿಂದ ಗ್ರಾಮೀಣ ಮಹಿಳೆಯರು ಇಂದು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಡಾ. ಹೆಗ್ಗಡೆಯವರ ಪ್ರೋತ್ಸಾಹವನ್ನು ಇಲಾಖೆ ವತಿಯಿಂದ ಅವರು ಕೃತಜ್ಞತೆಯಿಂದ ಸ್ಮರಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್, ಧರ್ಮಸ್ಥಳದ ಪ್ರೋತ್ಸಾಹದಿಂದಾಗಿ ಹೈನುಗಾರಿಕೆ ಅಭಿವೃದ್ಧಿಯಲ್ಲಿ ದಕ್ಷಿಣಕನ್ನಡ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ ಎಂದು ಹೇಳಿದರು.

ಹೇಮಾವತಿ ವೀ. ಹೆಗ್ಗಡೆ ಸಿ.ಇ.ಒ. ಅನಿಲ್ ಕುಮಾರ್, ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಆಡಳಿತ ನಿರ್ದೇಶಕ ಕೆ.ಎನ್. ಜನಾರ್ದನ್, ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.

ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಸ್ವಾಗತಿಸಿದರು. ತಾಂತ್ರಿಕ ಯೋಜನಾಧಿಕಾರಿ ಪುಷ್ಪರಾಜ್ ಧನ್ಯವಾದವಿತ್ತರು. ನಿರ್ದೇಶಕ ಶಿವಾನಂದ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು
July 6, 2026
9:10 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್
July 6, 2026
8:41 PM
by: ದ ರೂರಲ್ ಮಿರರ್.ಕಾಂ
E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?
July 6, 2026
3:59 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ
July 6, 2026
3:08 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror