ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹೈನುಗಾರಿಕೆ ಅಭಿವೃದ್ಧಿಗೆ ವಿಶೇಷ ನೆರವು, ಪ್ರೋತ್ಸಾಹ ಮತ್ತು ಮಾರ್ಗದರ್ಶನ ನೀಡಲಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಅವರು ಬುಧವಾರ ಧರ್ಮಸ್ಥಳದಲ್ಲಿ ಗ್ರಾಮಾಭಿವೃದ್ಧಿ ವಿಭಾಗದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ 9 ತಾಲ್ಲೂಕುಗಳಿಗೆ ತಲಾ 5 ರಂತೆ ಒಟ್ಟು 45 ದ್ರವಸಾರಜನಕ ಜಾಡಿಗಳನ್ನು ವಿತರಿಸಿ ಮಾತನಾಡಿದರು. ರೈತರಿಗೆ ನಿತ್ಯ ಆದಾಯ ಕೊಡುವ ಹಾಲು, ಹಣ್ಣು ಮತ್ತು ಹೂವಿನ ಗಿಡಗಳ ಬೆಳವಣಿಗೆ ಪ್ರೋತ್ಸಾಹ ನೀಡಲಾಗುತ್ತದೆ. ತಮ್ಮ ಸಂಸದರ ನಿಧಿಯಿಂದ ಬೀದರ್ ಜಿಲ್ಲೆಯಲ್ಲಿ ಹೈನುಗಾರಿಕೆ ಅಭಿವೃದ್ಧಿಗೆ 2 ಕೋಟಿ 45 ಲಕ್ಷ ರೂ. ಅನುದಾನ ನೀಡಲಾಗಿದೆ ಎಂದು ಹೇಳಿದರು.
ಅಧಿಕ ಆದಾಯ ಪಡೆಯಲು ರೈತರಿಗೆ ಹೈನುಗಾರಿಕೆ ಅನಿವಾರ್ಯ. ಧರ್ಮಸ್ಥಳದಿಂದಾಗಿ ಇಡಿ ರಾಜ್ಯದಲ್ಲಿ ಹಾಲು ಉತ್ಪಾದನೆಯಲ್ಲಿ ಕ್ರಾಂತಿಕಾರಿ ಸುಧಾರಣೆಯಾಗಿದೆ. ದೇಶೀತಳಿ, ಮಿಶ್ರತಳಿ ಅಭಿವೃದ್ಧಿ ಮತ್ತು ಆಧುನಿಕ ತಂತ್ರಜ್ಞಾನ ಬಳಕೆಯಿಂದ ಹೈನುಗಾರಿಕೆಯಲ್ಲಿ ಹೆಚ್ಚು ಲಾಭ ಪಡೆಯಬಹುದು ಎಂದು ಹೆಗ್ಗಡೆಯವರು ಹೇಳಿದರು.
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ದ.ಕ. ಜಿಲ್ಲಾ ಉಪನಿರ್ದೇಶಕ ಡಾ. ಅರುಣ್‌ಕುಮಾರ್ ಮಾತನಾಡಿ, ದ ಕ ಜಿಲ್ಲೆಯಲ್ಲಿ 398 ಹಾಲು ಉತ್ಪಾದಕರ ಸಹಕಾರಿ ಸಂಘಗಳಿದ್ದು ದಿನಕ್ಕೆ 2.5 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಇನ್ನೂ ಒಂದು ಲಕ್ಷ ಲೀ. ಹಾಲಿನ ಕೊರತೆ ಇದೆ.ಹೈನುಗಾರಿಕೆಯಿಂದ ಗ್ರಾಮೀಣ ಮಹಿಳೆಯರು ಇಂದು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಡಾ. ಹೆಗ್ಗಡೆಯವರ ಪ್ರೋತ್ಸಾಹವನ್ನು ಇಲಾಖೆ ವತಿಯಿಂದ ಅವರು ಕೃತಜ್ಞತೆಯಿಂದ ಸ್ಮರಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್, ಧರ್ಮಸ್ಥಳದ ಪ್ರೋತ್ಸಾಹದಿಂದಾಗಿ ಹೈನುಗಾರಿಕೆ ಅಭಿವೃದ್ಧಿಯಲ್ಲಿ ದಕ್ಷಿಣಕನ್ನಡ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ ಎಂದು ಹೇಳಿದರು.
ಹೇಮಾವತಿ ವೀ. ಹೆಗ್ಗಡೆ ಸಿ.ಇ.ಒ. ಅನಿಲ್ ಕುಮಾರ್, ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಆಡಳಿತ ನಿರ್ದೇಶಕ ಕೆ.ಎನ್. ಜನಾರ್ದನ್, ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.
ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಸ್ವಾಗತಿಸಿದರು. ತಾಂತ್ರಿಕ ಯೋಜನಾಧಿಕಾರಿ ಪುಷ್ಪರಾಜ್ ಧನ್ಯವಾದವಿತ್ತರು. ನಿರ್ದೇಶಕ ಶಿವಾನಂದ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.
ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…