ದೀಪಾವಳಿ ಪ್ರಯಾಣ | ಕೆಎಸ್‌ಆರ್‌ಟಿಸಿ ಯಿಂದ 2 ಸಾವಿರ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ |

October 27, 2024
6:10 AM

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ 2ಸಾವಿರ ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ಅ 30 ರಿಂದ ನ.1 ರವರೆಗೆ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ಈ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಹಾಗೂ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಹೆಚ್ಚುವರಿ ವಾಹನಗಳು ಸಂಚಾರ ಪ್ರಾರಂಭಿಸಲಿವೆ.

ತಮಿಳುನಾಡು ಹಾಗೂ ಕೇರಳ ಕಡೆಗೆ ತೆರಳುವ ಬಸ್‌ಗಳು ಶಾಂತಿನಗರ ಬಸ್ ನಿಲ್ದಾಣದಿಂದ ಹೊರಡಲಿವೆ. ಪ್ರಯಾಣಕರ ಅನುಕೂಲಕ್ಕಾಗಿ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದೆ. ಇದಲ್ಲದೇ ರಾಜ್ಯದ ಮತ್ತು ಅಂತರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ನವೆಂಬರ್ 3 ಹಾಗೂ 4 ರಂದು ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗುವುದು. www.ksrtc.karnataka.gov.in ವೆಬ್‌ಸೈಟ್ ಮುಖಾಂತರ ಇ-ಟಿಕೆಟ್ ಬುಕ್ಕಿಂಗ್‌ಅನ್ನು ಮಾಡಬಹುದಾಗಿದೆ ಎಂದು ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ. ಇದಲ್ಲದೇ ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲ ತಾಲೂಕು ಹಾಗೂ ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕೆ ಅನುಗುಣವಾಗಿ ವಿಶೇಷ ಸಾರಿಗೆ ಕಲ್ಪಿಸಲಾಗುವುದು ಎಂದು ತಿಳಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror