ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ 2ಸಾವಿರ ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ಅ 30 ರಿಂದ ನ.1 ರವರೆಗೆ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ಈ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಹಾಗೂ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಹೆಚ್ಚುವರಿ ವಾಹನಗಳು ಸಂಚಾರ ಪ್ರಾರಂಭಿಸಲಿವೆ.
ತಮಿಳುನಾಡು ಹಾಗೂ ಕೇರಳ ಕಡೆಗೆ ತೆರಳುವ ಬಸ್‌ಗಳು ಶಾಂತಿನಗರ ಬಸ್ ನಿಲ್ದಾಣದಿಂದ ಹೊರಡಲಿವೆ. ಪ್ರಯಾಣಕರ ಅನುಕೂಲಕ್ಕಾಗಿ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದೆ. ಇದಲ್ಲದೇ ರಾಜ್ಯದ ಮತ್ತು ಅಂತರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ನವೆಂಬರ್ 3 ಹಾಗೂ 4 ರಂದು ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗುವುದು. www.ksrtc.karnataka.gov.in ವೆಬ್‌ಸೈಟ್ ಮುಖಾಂತರ ಇ-ಟಿಕೆಟ್ ಬುಕ್ಕಿಂಗ್‌ಅನ್ನು ಮಾಡಬಹುದಾಗಿದೆ ಎಂದು ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ. ಇದಲ್ಲದೇ ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲ ತಾಲೂಕು ಹಾಗೂ ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕೆ ಅನುಗುಣವಾಗಿ ವಿಶೇಷ ಸಾರಿಗೆ ಕಲ್ಪಿಸಲಾಗುವುದು ಎಂದು ತಿಳಿಸಲಾಗಿದೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…