ಬೇಸಿಗೆ ಸಮಯದಲ್ಲಿ ನೀರಿನ ಸಂರಕ್ಷಣೆ ಅಭಿಯಾನದ ಜೊತೆಗೆ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ ಮಾಡಲಾಗಿದೆ. ಇದು ಸರ್ಕಾರದ ಕಾರ್ಯಕ್ರಮವೇ ಹೊರತು ರಾಜಕೀಯ ಕಾರ್ಯಕ್ರಮವಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ ಜಾರಿ ಮಾಡಲಾಗಿದ್ದು, 6ನೇ ಹಂತದ ಯೋಜನೆಗೆ ಡಿಪಿಆರ್ ಸಿದ್ಧಪಡಿಸಲಾಗಿದೆ. ನೀರಿನ ಸದ್ಬಳಕೆ ಹಾಗೂ ಸಂರಕ್ಷಣೆಗೆ ಜನರಲ್ಲಿ ಜಾಗೃತಿ ಮೂಡಿಸಲು ಒಂದು ತಿಂಗಳ ಕಾಲ ಅಭಿಯಾನ ಹಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಸಾರ್ವಜನಿಕರು ಈ ಅಭಿಯಾನದಲ್ಲಿ ಭಾಗವಹಿಸಿ, ನೀರಿನ ಉಳಿತಾಯ ಮಾಡಬೇಕು ಎಂದು ಡಿ ಕೆ ಶಿವಕುಮಾರ್ ಕರೆ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel