Advertisement
ಸುದ್ದಿಗಳು

#Chandrayan3 | ಚಂದ್ರಯಾನ-3 ಯಶಸ್ಸಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ | ಮಹಾಪೂಜೆ, ಕಾರ್ತಿಕ ಪೂಜಾ ಸೇವೆ |

Share

ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ನಮ್ಮ ಹೆಮ್ಮೆಯ ಇಸ್ರೋ ಸಂಸ್ಥೆಯ ಚಂದ್ರಯಾನ3  ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಇಳಿಯಲಿ ಎಂದು ನಾಗರಪಂಚಮಿಯಂದು ಕುಕ್ಕೆ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವಳದ ಆಡಳಿದ ಮಂಡಳಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಶ್ರೀ ದೇವರಿಗೆ ಇಸ್ರೋ ಹೆಸರಿನಲ್ಲಿ ಸೇವೆ ನೆರವೇರಿಸಿತು.


ಭಾರತದ ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷಿಯ ಚಂದ್ರಯಾನ 3 ನೌಕೆಯು ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದು ಇತಿಹಾಸ ನಿರ್ಮಿಸಲಿ ಮತ್ತು ಇದರೊಂದಿಗೆ ನಮ್ಮ ರಾಷ್ಟ್ರದ ಹೆಸರು ಪ್ರಪಂಚದಲ್ಲೆ ಅಗ್ರಗಣ್ಯವಾಗಲಿ ಎಂದು ಕುಕ್ಕೆ ಸುಬ್ರಹ್ಮಣ್ಯನಿಗೆ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ನೇತೃತ್ವದಲ್ಲಿ ದೇವಳದ ಆಡಳಿತ ಮಂಡಳಿ, ಊರ ಹಿರಿಯರು ಮತ್ತು ಸಾರ್ವಜನಿಕ ಭಕ್ತರು ನಾಗರಪಂಚಮಿಯ ಪುಣ್ಯ ದಿನ ಕುಕ್ಕೆ ಸುಬ್ರಹ್ಮಣ್ಯನಲ್ಲಿ ಪ್ರಾರ್ಥನೆ ಸಲ್ಲಿಸಿದರು.ಅಲ್ಲದೆ ಇಸ್ರೋ ಸಂಸ್ಥೆಯ ಪರವಾಗಿ ನಾಗರಾಜನಿಗೆ ಹಾಲು ಅರ್ಪಿಸಿದರು. ಶ್ರೀ ದೇವಳದ ಆಡಳಿತ ಮಹಾಪೂಜೆ ಮತ್ತು ನಾಗ ತಂಬಿಲ(ಕಾರ್ತಿಕ ಪೂಜೆ) ಸೇವೆ ಸಮರ್ಪಿಸಿ ಚಂದ್ರಯಾನ 3 ಯಶಸ್ಸಿಗೆ ದೇವಳದ ಆಡಳಿತ ಮಂಡಳಿ ಮತ್ತು ಊರ ಹಿರಿಯರು,ಭಕ್ತರು ಪ್ರಾರ್ಥಿಸಿದರು.

ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಎಸ್ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ, ಶ್ರೀವತ್ಸ ಬೆಂಗಳೂರು, ಪಿಜಿಎಸ್‌ಎನ್ ಪ್ರಸಾದ್, ಮನೋಹರ ರೈ, ಲೋಕೇಶ್ ಮುಂಡುಕಜೆ, ವನಜಾ.ವಿ.ಭಟ್, ಶೋಭಾ ಗಿರಿಧರ್, ದೇವಳದ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್ ಸೇರಿದಂತೆ ಭಕ್ತರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ

ವಿಶ್ವದ 21,439 ನದಿ ತೋಡುಗಳ ಅಧ್ಯಯನದಲ್ಲಿ ಶೇ.78.8ರಷ್ಟು ನದಿಗಳಲ್ಲಿ ಕಳೆದ ನಾಲ್ಕು ದಶಕಗಳಲ್ಲಿ…

2 hours ago

ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!

ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…

10 hours ago

ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…

15 hours ago

₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’

₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್‌ 18 ಪ್ರೊ ಖರೀದಿಗಾಗಿ ದೇಶದ ಹಲವು…

2 days ago

ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ

ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುನ್ಸೂಚನೆಯಲ್ಲಿದ್ದಷ್ಟು…

2 days ago

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

3 days ago