ಗ್ರಾಮ ಪಂಚಾಯತಿಗಳಲ್ಲಿ ರಚಿಸಲಾದ ವಿಶೇಷ ಕಾರ್ಯಡೆಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು

July 1, 2025
10:02 AM

ಪ್ರವಾಹ ಪರಿಸ್ಥಿತಿ ಸಮರ್ಪಕವಾಗಿ ನಿರ್ವಹಿಸಲು ಗ್ರಾಮ ಪಂಚಾಯತಿಗಳಲ್ಲಿ ರಚಿಸಲಾದ ವಿಶೇಷ ಕಾರ್ಯಡೆಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಿದರೆ ಪ್ರವಾಹದಿಂದ ಆಗಬಹುದಾದ ಸಂಭವನೀಯ ಹಾನಿ ತಡೆಗಟ್ಟಬಹುದಾಗಿದೆ  ಎಂದು ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ  ತಿಳಿಸಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ  ಜರುಗಿದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,  ಪ್ರಸಕ್ತ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಆಗುತ್ತಿದ್ದು ಎಲ್ಲ ನದಿಗಳ ಒಳ ಹರಿವು ಹೆಚ್ವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಸಂಭವನೀಯ ಪ್ರವಾಹಕ್ಕೆ ಒಳಗಾಗಬಹುದಾದ ಗ್ರಾಮಗಳಲ್ಲಿನ ಜನ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಕ್ರಮ ವಹಿಸಬೇಕು. ಈ ಕಾರ್ಯದಲ್ಲಿ ಅಗತ್ಯ ಬಿದ್ದರೆ ಪೋಲಿಸ್ ಸಿಬ್ಬಂದಿಗಳ ಸಹಾಯ ಪಡೆದುಕೊಳ್ಳುವಂತೆ ಅವರು ಸೂಚಿಸಿದರು. ಗ್ರಾಮಲೆಕ್ಕಾಧಿಕಾರಿಗಳಿಗೆ ಸ್ಥಳೀಯವಾಗಿ ಕಾರ್ಯನಿರ್ವಹಿಸಲು ಅನುಕೂಲವಾಗಲು ಗ್ರಾಮ ಪಂಚಾಯತಿಗಳಲ್ಲಿ ಕಾರ್ಯ ನಿರ್ವಹಿಸಲು ಸ್ಥಳಾವಕಾಶ ಒದಗಿಸಲಾಗಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ
September 21, 2026
12:57 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror