ಪ್ರವಾಹ ಪರಿಸ್ಥಿತಿ ಸಮರ್ಪಕವಾಗಿ ನಿರ್ವಹಿಸಲು ಗ್ರಾಮ ಪಂಚಾಯತಿಗಳಲ್ಲಿ ರಚಿಸಲಾದ ವಿಶೇಷ ಕಾರ್ಯಡೆಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಿದರೆ ಪ್ರವಾಹದಿಂದ ಆಗಬಹುದಾದ ಸಂಭವನೀಯ ಹಾನಿ ತಡೆಗಟ್ಟಬಹುದಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ತಿಳಿಸಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಜರುಗಿದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಸಕ್ತ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಆಗುತ್ತಿದ್ದು ಎಲ್ಲ ನದಿಗಳ ಒಳ ಹರಿವು ಹೆಚ್ವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಸಂಭವನೀಯ ಪ್ರವಾಹಕ್ಕೆ ಒಳಗಾಗಬಹುದಾದ ಗ್ರಾಮಗಳಲ್ಲಿನ ಜನ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಕ್ರಮ ವಹಿಸಬೇಕು. ಈ ಕಾರ್ಯದಲ್ಲಿ ಅಗತ್ಯ ಬಿದ್ದರೆ ಪೋಲಿಸ್ ಸಿಬ್ಬಂದಿಗಳ ಸಹಾಯ ಪಡೆದುಕೊಳ್ಳುವಂತೆ ಅವರು ಸೂಚಿಸಿದರು. ಗ್ರಾಮಲೆಕ್ಕಾಧಿಕಾರಿಗಳಿಗೆ ಸ್ಥಳೀಯವಾಗಿ ಕಾರ್ಯನಿರ್ವಹಿಸಲು ಅನುಕೂಲವಾಗಲು ಗ್ರಾಮ ಪಂಚಾಯತಿಗಳಲ್ಲಿ ಕಾರ್ಯ ನಿರ್ವಹಿಸಲು ಸ್ಥಳಾವಕಾಶ ಒದಗಿಸಲಾಗಿದೆ ಎಂದರು.
ಕೇಂದ್ರ ಸರ್ಕಾರದ ಫಸಲ್ ಭೀಮಾ ಯೋಜನೆಯಡಿ ಅತಿ ಹೆಚ್ಚು ಬೆಳೆ ವಿಮೆ ಪಡೆದ…
ಲಡಾಖ್‌ನ ದ್ರಾಸುದಲ್ಲಿಂದು 26ನೇ ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ…
ಧರ್ಮ ಎನ್ನುವ ತಳಹದಿಯಲ್ಲಿ ಬದುಕು ನಿಂತಿದೆ. ಅರ್ಥ ಮತ್ತು ಕಾಮನೆಗಳಿಗೆ ಧರ್ಮವೇ ತಳಹದಿ.…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜುಲೈ 27 ರಂದು ಮಧ್ಯಪ್ರದೇಶ ದಾಟಿ ರಾಜಸ್ಥಾನ ಗಡಿ…
ಭಾರತದಲ್ಲಿ, ಮೇ ತಿಂಗಳಿನಲ್ಲಿ ಉಂಟಾದ ತೀವ್ರ ಉಷ್ಣತೆಯು ಬೆಳೆ ಇಳುವರಿ ಮತ್ತು ಪೂರೈಕೆ…
ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧವಾಗಿದೆ. ಜ್ಯೋತಿಷ್ಯ ಶಾಸ್ತ್ರದ…