ಬೇಸಿಗೆ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಗಮನದಲ್ಲಿಟ್ಟುಕೊಂಡು ಮಧ್ಯ ರೈಲ್ವೆಯು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್ ಮುಂಬೈ ಮತ್ತು ಸರ್. ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಈ ರೈಲುಗಳು, ಎರಡೂ ದಿಕ್ಕುಗಳಲ್ಲಿ ದಾದರ್, ಥಾಣೆ, ಕಲ್ಯಾಣ್, ಲೋನಾವಾಲ, ಪುಣೆ, ಸತಾರಾ, ಕರಾಡ್, ಸಾಂಗ್ಲಿ, ಮಿರಜ್, ಕುಡಚಿ, ರಾಯಬಾಗ್, ಘಟಪ್ರಭಾ, ಬೆಳಗಾವಿ, ಲೋಂಡಾ, ಧಾರವಾಡ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಬಿರೂರು, ಅರಸೀಕೆರೆ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಯಾಣಿಕರು ಅಧಿಕೃತ ರೈಲ್ವೆ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel