ಮಹಾಶಿವರಾತ್ರಿಯಂದು ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಮೇಳದ ಅಂತಿಮ ಅಮೃತ ಸ್ನಾನ ನೆರವೇರಲಿದೆ. ಭಾರೀ ಜನದಟ್ಟಣೆಯಾಗುವ ಸಾಧ್ಯತೆ ಇರುವುದರಿಂದ ಉತ್ತರ ಮಧ್ಯ ರೈಲ್ವೆ, ಈಶಾನ್ಯ ರೈಲ್ವೆ, ಉತ್ತರ ರೈಲ್ವೆ ವ್ಯಾಪಕ ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಪ್ರಯಾಗ್‌ರಾಜ್‌ನಿಂದ 350 ಕ್ಕೂ ಹೆಚ್ಚು ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಅಗತ್ಯವಿದ್ದರೆ, ಹೆಚ್ಚುವರಿ ವಿಶೇಷ ರೈಲುಗಳನ್ನು ಓಡಿಸಲು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ರೈಲ್ವೆ ಮಂಡಳಿ ಅಧ್ಯಕ್ಷರು, ಎಲ್ಲಾ ರೈಲ್ವೆ ವಲಯಗಳ ಪ್ರದಾನ ವ್ಯವಸ್ಥಾಪಕರಿಗೆ ಸೂಚನೆ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel