Advertisement
ಸುದ್ದಿಗಳು

ಬಳ್ಳಾರಿ–ವಿಜಯನಗರದಲ್ಲಿ ಸ್ಪೀಡ್ ಪೋಸ್ಟ್, ಪಾರ್ಸೆಲ್ ಬುಕ್ಕಿಂಗ್ ಅವಧಿ ವಿಸ್ತರಣೆ

Share

ಭಾರತೀಯ ಅಂಚೆ ಇಲಾಖೆಯು ಸ್ಪೀಡ್ ಪೋಸ್ಟ್, ಇತರೆ ಪತ್ರ ಹಾಗೂ ಪಾರ್ಸೆಲ್‌ಗಳ ಬುಕ್ಕಿಂಗ್ ಸೇವಾ ಅವಧಿಯನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಅಂಚೆ ಕಚೇರಿಗಳಲ್ಲಿ ವಿಸ್ತರಿಸಿದೆ ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕ ಆರ್.ಅಶೋಕ್ ತಿಳಿಸಿದ್ದಾರೆ. ಸೋಮವಾರದಿಂದ ಶುಕ್ರವಾರದವರೆಗೆ ಕೆಲಸದ ದಿನಗಳಿಗೆ ಮಾತ್ರ ಈ ಬುಕ್ಕಿಂಗ್ ಸಮಯದ ವಿಸ್ತರಣೆ ಅನ್ವಯವಾಗುತ್ತದೆ ಎಂದು ಹೇಳಿದ್ದಾರೆ. ಸಾರ್ವಜನಿಕರ ಅನುಕೂಲಕ್ಕಾಗಿ ಭಾರತೀಯ ಅಂಚೆ ಇಲಾಖೆಯ ಗ್ರಾಹಕ ಸ್ವಯಂ ಸೇವಾ ಪೋರ್ಟಲ್ ಲಭ್ಯವಿದ್ದು, ಇದರ ಮೂಲಕ ಅಂಚೆ ವಸ್ತುಗಳ ಬುಕ್ಕಿಂಗ್, ಟ್ರಾಕಿಂಗ್, ದೂರು ಸಲ್ಲಿಕೆ, ಸೇವೆಗಳ ವಿವರಗಳು ಹಾಗೂ ಇತರೆ ಅನೇಕ ಸೇವೆಗಳನ್ನು ಮನೆಯಲ್ಲಿಯೇ ಕುಳಿತು ಆನ್‌ಲೈನ್ ನಲ್ಲಿಯೇ ಪಡೆಯಬಹುದು ಎಂದು ಮಾಹಿತಿ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

7 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

8 hours ago

ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ

ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…

8 hours ago

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…

8 hours ago

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…

24 hours ago

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

1 day ago