Advertisement
ಸುದ್ದಿಗಳು

ಮೌಲ್ಯವರ್ಧನೆ ಮೂಲಕ ಉತ್ತಮ ಬೆಲೆ ಸಾಧ್ಯ – ರೈತರು ಉದ್ಯಮಿಗಳಾಗಬೇಕು

Share

ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ, ಜಿಲ್ಲಾ ಪಂಚಾಯಿತಿ, ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಚಿಕ್ಕಮಗಳೂರಿನಲ್ಲಿ ಕಾಳುಮೆಣಸು ಸೇರಿದಂತೆ ಸಾಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಹಾಗೂ ರಫ್ತು ಕುರಿತ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಎಂ.ಎನ್. ನಾಗರಾಜ್ ಚಾಲನೆ ನೀಡಿ, ಇದೇ ವೇಳೆ ಸಾಂಬಾರು ಉತ್ಪನ್ನಗಳ ಕುರಿತು ಸಿದ್ಧಪಡಿಸಲಾದ ಮಾಹಿತಿ ಕೈಪಿಡಿಯನ್ನು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರೈತರು ಬೆಳೆದ ಬೆಳೆಗಳಿಗೆ ಸಂಸ್ಕರಣೆ ಹಾಗೂ ಮೌಲ್ಯವರ್ಧನೆ ಮಾಡುವ ಮೂಲಕ ಉತ್ತಮ ಬೆಲೆ ಪಡೆಯಬಹುದು ಎಂದು ಹೇಳಿದರು. ರೈತರು ಕೇವಲ ಬೆಳೆಗಾರರಾಗಿ ಉಳಿಯದೆ ಉದ್ಯಮಿಗಳಾಗಿ ಹೊರಹೊಮ್ಮುವ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು ಎಂದು ಕರೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ ಮಾತನಾಡಿ, ವಿದ್ಯಾರ್ಥಿಗಳು ಉದ್ಯೋಗಾಕಾಂಕ್ಷಿಗಳಾಗುವುದಕ್ಕಿಂತ ಉದ್ಯಮಶೀಲರಾಗುವತ್ತ ಹೆಚ್ಚಿನ ಗಮನ ಹರಿಸುವ ಅಗತ್ಯವಿದೆ ಎಂದು ಹೇಳಿದರು. ರೈತರು ಬೆಳೆದ ಉತ್ಪನ್ನಗಳನ್ನು ಸಂಸ್ಕರಿಸಿ, ಮಾರುಕಟ್ಟೆಗೆ ಪರಿಚಯಿಸುವ ಮೂಲಕ ಹೆಚ್ಚಿನ ಆದಾಯ ಗಳಿಸಬಹುದಾಗಿದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ತಿರುಮಲೇಶ್ ಮಾತನಾಡಿ, ರಾಗಿ ಸೇರಿದಂತೆ ಪಾರಂಪರಿಕ ಬೆಳೆಗಳನ್ನು ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕೆಯಲ್ಲಿ ಬಳಸಲಾಗುತ್ತಿದೆ. ಇಂತಹ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಇದೆ. ರೈತರು ತಮ್ಮ ಬೆಳೆಗಳನ್ನು ಮೌಲ್ಯವರ್ಧನೆ ಮಾಡುವತ್ತ ಗಮನ ಹರಿಸುವುದು ಅಗತ್ಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಸಿ.ಎಸ್. ಶಿವಪ್ರಸಾದ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ರೈತರು ಉಪಸ್ಥಿತರಿದ್ದರು.

A training program on spice processing, value addition, and export was inaugurated by Chikkamagaluru Deputy Commissioner MN Nagaraj. He emphasized that farmers can earn better income through value addition and encouraged them to become entrepreneurs instead of just producers.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

41 minutes ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

57 minutes ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

1 hour ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

9 hours ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

19 hours ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

24 hours ago