Advertisement
MIRROR FOCUS

ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ

Share

ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವುದರಲ್ಲಿ ಪ್ರಖ್ಯಾತಿ ಪಡೆದಿರುತ್ತವೆ. ಅಂತಹ ದೇವಾಲಯಗಳಲ್ಲಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶ್ರೀಕ್ಷೇತ್ರ ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯವೂ ಒಂದು.

ಸಾವಿರ ವರ್ಷಗಳ ಐತಿಹಾಸಿಕ ಹಿನ್ನೆಲೆಯುಳ್ಳ ಈ ಸನ್ನಿಧಿಯು ಭಕ್ತರ ಅಭಿಷ್ಠೆಗಳನ್ನು ಈಡೇರಿಸುವ ಮೂಲಕ ಇಂದಿಗೂ ಜನಮಾನಸದಲ್ಲಿ ಅಜರಾಮರವಾಗಿ ಉಳಿದಿದೆ.   ಶುರ್ಪಾಲಿ ನರಸಿಂಹ ಸ್ವಾಮಿ ದೇವಾಲಯ 1000 ವರ್ಷಗಳ ಹಿಂದೆ ನಿರ್ಮಾಣವಾಗಿದೆ. ಇಲ್ಲಿ ತಪೋನಿರತರಾದ ಉತ್ತರಾಧಿಮಠದ 1008 ವಿದ್ಯಾಧೀಶ ತೀರ್ಥ ಶ್ರೀಪಾದರು, 1008 ಸತ್ಯಪ್ರಮೋದತೀರ್ಥ ಶ್ರೀಪಾದಂಗಳವರು, ಇಂದಿನ ಪೀಠಾಧಿಪತಿಗಳಾದ 1008 ಸತ್ಯಾತ್ಮತೀರ್ಥ ಶ್ರೀಪಾದಂಗಳವರು, ಯಾದವಾರ್ಯರು, ಶ್ರೀನಿವಾಸ ತೀರ್ಥರು, ಜಮಖಂಡಿ ಗುರುರಾಜಾಚಾರ್ಯರು ಸಾಧನೆಗೈದ ಸ್ಥಾನ ಇದಾಗಿದೆ.

ಕ್ಷೇತ್ರದಲ್ಲಿ ಪ್ರತಿ ವರ್ಷ ವೈಶಾಖ ಶುದ್ಧ ಸಪ್ತಮಿಯಿಂದ ಉತ್ಸವ ಪ್ರಾರಂಭವಾಗಿ ವೈಶಾಖ ವದ್ಯ ದ್ವಿತಿಯಾವರೆಗೆ 9 ದಿನ ಅವ್ಯಾಹತವಾಗಿ ನಡೆಯುತ್ತವೆ. ಉತ್ಸವದ ಆ ದಿನಗಳಲ್ಲಿ ಪ್ರತಿನಿತ್ಯ ಬೆಳಗ್ಗೆ ಪಲ್ಲಕ್ಕಿ, ವಾಹನೋತ್ಸವ ನೆರವೇರುತ್ತದೆ. ವೈಶಾಖ ಶುದ್ಧ ಆಗಿ ಹುಣ್ಣಿಮೆಯಂದು ಲಕ್ಷ್ಮೀ ನರಸಿಂಹ ದೇವರ ರಥೋತ್ಸವ ನಡೆಯುತ್ತದೆ. ಭಾಗವತದಲ್ಲೂ ಈ ದೇವಾಲಯದ ಉಲ್ಲೇಖವಿದೆ. ಪುರಾಣ ಪ್ರಸಿದ್ಧ ಈ ದೇವಾಲಯದಲ್ಲಿ ಪ್ರತಿ ವರ್ಷ ಜಾತ್ಯೋತ್ಸವ, ಹೋಮ, ಹವನ ಪೂಜಾ ಕೈಂಕರ್ಯಗಳು ವಿಜೃಂಭಣೆಯಿಂದ ನಡೆಯುತ್ತವೆ.

ಈ ಕ್ಷೇತ್ರದಲ್ಲಿ ಅನೇಕ ಪವಾಡಗಳು ನಡೆದಿದೆ. ವಿಜೃಂಭಣೆಯಿಂದ ನರಸಿಂಹ ಜಯಂತಿ ಆಚರಿಸಲಾಗುತ್ತದೆ. ಅಲ್ಲದೆ 8 ದಿನಗಳ ಕಾಲ ಜಾತ್ರೆ ನಡೆಯುತ್ತದೆ. ಬೇರೆ ರಾಜ್ಯಗಳಿಂದಲೂ ಸಹಸ್ರಾರು ಭಕ್ತರು ಬಂದು ಜಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ. ಭಕ್ತರ ಇಷ್ಟಾರ್ಥಗಳು ನರಸಿಂಹ ಸ್ವಾಮಿ ಈಡೇರಿಸುತ್ತಾನೆ ಎಂಬ ನಂಬಿಕೆ ಇದೆ ಎಂದು ಭಕ್ತರಾದ ಜಯಶ್ರೀ ಶಾಮರಾವ್ ಮುಕಾಶಿ ಹೇಳುತ್ತಾರೆ.

Advertisement

ಈ ಸನ್ನಿಧಿಯಲ್ಲಿ ಸ್ವಾಮಿಯನ್ನು ಪ್ರಾರ್ಥಿಸಿ ಮಂತ್ರಾಕ್ಷತೆ ತೆಗೆದುಕೊಂಡು ಹೋದರೆ ಮನಸ್ಸಿನಲ್ಲಿ ಅಂದುಕೊಂಡ ಕೆಲಸ ನೆರವೇರುತ್ತದೆ ಎಂದು ಹೇಳುತ್ತಾರೆ ಭಕ್ತೆ ಶೀಲಾ ರಮೇಶ್ ಉಮರ್ಜಿ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಡ್ಡಗಾಡು ಪ್ರದೇಶಗಳ ಕೃಷಿ ಮತ್ತು ಗ್ರಾಮೀಣ ಆರ್ಥಿಕತೆಗೆ ದೊಡ್ಡ ಸವಾಲು | ಮಧ್ಯವರ್ತಿಗಳ ಅವಲಂಬನೆ ಕಡಿಮೆ ಮಾಡಲು ರೈತರ ಹೊಸ ಮಾರ್ಗ

ಡಾರ್ಜಿಲಿಂಗ್–ಸಿಕ್ಕಿಂ ಹಿಮಾಲಯಗಳಲ್ಲಿ ಮಾರುಕಟ್ಟೆ ಸಂಪರ್ಕದ ಕೊರತೆಯಿಂದ ಕೃಷಿ ಆದಾಯ ಕುಸಿತವಾಗಿದೆ. ಕಳಪೆ ರಸ್ತೆ,…

6 hours ago

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?

12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

13 hours ago

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

17 hours ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

18 hours ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

1 day ago