ಅಡಿಕೆ ಹಳದಿ ಎಲೆರೋಗ ಹಾಗೂ ಎಲೆಚುಕ್ಕಿ ರೋಗದ ಕಾರಣದಿಂದ ಅಡಿಕೆ ಫಸಲು ನಾಶದ ಭಯದಿಂದ ಮಲೆನಾಡು ಭಾಗದ ಅಡಿಕೆ ಬೆಳೆಗಾರರಲ್ಲಿ ಮತ್ತೊಬ್ಬ ಯುವ ಕೃಷಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮೂಲಕ ಎರಡನೇ ಪ್ರಕರಣ ದಾಖಲಾಗಿದೆ.
ಎಲೆಚುಕ್ಕಿ ರೋಗ, ಹಳದಿ ಎಲೆರೋಗ ಬಾಧೆಗಳು ಕಾಡುತ್ತಿದ್ದು, ಫಲಸು ನಾಶವಾಗಿದ್ದು, ಕೃಷಿಗಾಗಿ ಸಾಲ ಮಾಡಿಕೊಂಡಿದ್ದ ಯುವ ಕೃಷಿಕ ಮಾನಸಿಕವಾಗಿ ಕುಗ್ಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಅಭಿಲಾಷ್ ಆತ್ಮಹತ್ಯೆಗೆ ಶರಣಾದ ಯುವಕ. ಕೃಷಿಗಾಗಿ ಸುಮಾರ 3 ಲಕ್ಷ ಸಾಲ ಮಾಡಿದ್ದರು ಎನ್ನಲಾಗಿದೆ. ತೋಟವನ್ನು ಸಂಪೂರ್ಣವಾಗಿ ರೋಗ ಬಾಧಿಸಿರುವುದರಿಂದ ಕಂಗಾಲಾದ ಅಭಿಲಾಷ್ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel