ಹಳದಿ ಎಲೆರೋಗ, ಎಲೆಚುಕ್ಕಿ ರೋಗ | ಅಡಿಕೆ ಬೆಳೆಗಾರರೇ ಆತ್ಮಹತ್ಯೆ ಪರಿಹಾರವಲ್ಲ |

November 10, 2022
10:35 PM

ಅಡಿಕೆ ಹಳದಿ ಎಲೆರೋಗ ಹಾಗೂ ಎಲೆಚುಕ್ಕಿ ರೋಗದ ಕಾರಣದಿಂದ ಅಡಿಕೆ ಫಸಲು ನಾಶದ ಭಯದಿಂದ ಮಲೆನಾಡು ಭಾಗದ ಅಡಿಕೆ ಬೆಳೆಗಾರರಲ್ಲಿ ಮತ್ತೊಬ್ಬ ಯುವ ಕೃಷಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮೂಲಕ ಎರಡನೇ ಪ್ರಕರಣ ದಾಖಲಾಗಿದೆ.

ಎಲೆಚುಕ್ಕಿ ರೋಗ, ಹಳದಿ ಎಲೆರೋಗ ಬಾಧೆಗಳು ಕಾಡುತ್ತಿದ್ದು, ಫಲಸು ನಾಶವಾಗಿದ್ದು, ಕೃಷಿಗಾಗಿ ಸಾಲ ಮಾಡಿಕೊಂಡಿದ್ದ ಯುವ ಕೃಷಿಕ ಮಾನಸಿಕವಾಗಿ ಕುಗ್ಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಅಭಿಲಾಷ್  ಆತ್ಮಹತ್ಯೆಗೆ ಶರಣಾದ ಯುವಕ. ಕೃಷಿಗಾಗಿ ಸುಮಾರ 3 ಲಕ್ಷ ಸಾಲ ಮಾಡಿದ್ದರು ಎನ್ನಲಾಗಿದೆ. ತೋಟವನ್ನು ಸಂಪೂರ್ಣವಾಗಿ ರೋಗ ಬಾಧಿಸಿರುವುದರಿಂದ ಕಂಗಾಲಾದ ಅಭಿಲಾಷ್ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಭಾಗದ ಬಹುತೇಕ ಅಡಿಕೆ ತೋಟಗಳನ್ನು ಎಲೆಚುಕ್ಕಿ ರೋಗ ಆವರಿಸಿದ್ದು, ದಿನೇ ದಿನೇ ರೋಗಬಾಧೆ ಹೆಚ್ಚುತ್ತಲೇ ಇದೆ. ಇದರಿಂದಾಗಿ ರೈತರು ಆತಂಕಕ್ಕೆ ಸಿಲುಕಿದ್ದು ಪರಿಹಾರ ಕ್ರಮಗಳು ಕಾಣದೇ ಇರುವುದರಿಂದ ಇಂತಹ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror