ಅಡಿಕೆ ಹಳದಿ ಎಲೆರೋಗ ಹಾಗೂ ಎಲೆಚುಕ್ಕಿ ರೋಗದ ಕಾರಣದಿಂದ ಅಡಿಕೆ ಫಸಲು ನಾಶದ ಭಯದಿಂದ ಮಲೆನಾಡು ಭಾಗದ ಅಡಿಕೆ ಬೆಳೆಗಾರರಲ್ಲಿ ಮತ್ತೊಬ್ಬ ಯುವ ಕೃಷಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮೂಲಕ ಎರಡನೇ ಪ್ರಕರಣ ದಾಖಲಾಗಿದೆ.
ಎಲೆಚುಕ್ಕಿ ರೋಗ, ಹಳದಿ ಎಲೆರೋಗ ಬಾಧೆಗಳು ಕಾಡುತ್ತಿದ್ದು, ಫಲಸು ನಾಶವಾಗಿದ್ದು, ಕೃಷಿಗಾಗಿ ಸಾಲ ಮಾಡಿಕೊಂಡಿದ್ದ ಯುವ ಕೃಷಿಕ ಮಾನಸಿಕವಾಗಿ ಕುಗ್ಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಅಭಿಲಾಷ್ ಆತ್ಮಹತ್ಯೆಗೆ ಶರಣಾದ ಯುವಕ. ಕೃಷಿಗಾಗಿ ಸುಮಾರ 3 ಲಕ್ಷ ಸಾಲ ಮಾಡಿದ್ದರು ಎನ್ನಲಾಗಿದೆ. ತೋಟವನ್ನು ಸಂಪೂರ್ಣವಾಗಿ ರೋಗ ಬಾಧಿಸಿರುವುದರಿಂದ ಕಂಗಾಲಾದ ಅಭಿಲಾಷ್ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಭಾಗದ ಬಹುತೇಕ ಅಡಿಕೆ ತೋಟಗಳನ್ನು ಎಲೆಚುಕ್ಕಿ ರೋಗ ಆವರಿಸಿದ್ದು, ದಿನೇ ದಿನೇ ರೋಗಬಾಧೆ ಹೆಚ್ಚುತ್ತಲೇ ಇದೆ. ಇದರಿಂದಾಗಿ ರೈತರು ಆತಂಕಕ್ಕೆ ಸಿಲುಕಿದ್ದು ಪರಿಹಾರ ಕ್ರಮಗಳು ಕಾಣದೇ ಇರುವುದರಿಂದ ಇಂತಹ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ.https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…