ಸುದ್ದಿಗಳು

ಪುತ್ತಿಲ ಪರಿವಾರದಿಂದ ಪುತ್ತೂರಿನಲ್ಲಿ  ಶ್ರೀನಿವಾಸ ಕಲ್ಯಾಣೋತ್ಸವ | ಅಪೂರ್ವವಾದ ಕಾರ್ಯಕ್ರಮಕ್ಕೆ ಸಿದ್ಧತೆ |

Share
ಪುತ್ತಿಲ ಪರಿವಾರದ ವತಿಯಿಂದ ಡಿ.24 ಮತ್ತು 25 ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಲೋಕಕಲ್ಯಾಣರ್ಥವಾಗಿ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಬೃಹತ್ ಸಂತ ಸಮ್ಮೇಳನ ನಡೆಯುವ ಬಗ್ಗೆ ಪೂರ್ವಭಾವಿ ಸಭೆ ಮುಕ್ರಂಪಾಡಿಯ ಸುಭದ್ರ ಕಲ್ಯಾಣಮಂಟಪದಲ್ಲಿ  ನಡೆಯಿತು.
ಸಭೆಯಲ್ಲಿ ಮಾತನಾಡಿದ ಹಿಂದೂ ಮುಖಂಡ ಅರುಣ್ ಕುಮಾರ್ ಮಾತನಾಡಿ ,  ಡಿ.24 ರ ಸಂಜೆ ಬೊಳುವಾರಿನಿಂದ ತಿರುಪತಿಯಿಂದ ಆಗಮಿಸುವ ದೇವರ  ವೈಭವದ ಮೆರವಣಿಗೆ , ನಂತರ ರಾತ್ರಿ ಪೂಜೆ ನಂತರ ಸಾಂಸ್ಕೃತಿಕ ಕಾರ್ಯಕ್ರಮ ಮರುದಿನ ಬೆಳಿಗ್ಗೆ ವಿಶೇಷ ಉದಯಾಸ್ತಮಾನ ಪೂಜೆ , ನಂತರ ರಾಮಕೃಷ್ಣ ಕಾಟುಕುಕ್ಕೆ ಅವರಿಂದ ಭಜನೋತ್ಸವ ಸಂಜೆ ಬೃಹತ್ ಸಂತ ಸಮ್ಮೇಳನ ನಡೆಯಲಿದೆ.  ಸಭೆಯ ನಂತರ ಶ್ರೀನಿವಾಸ ಕಲ್ಯಾಣೋತ್ಸವ ಜರುಗಲಿದೆ. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.
ಎರಡು ದಿನದ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಅಂದಾಜು 1 ಲಕ್ಷಕ್ಕೂ ಅಧಿಕ  ಜನ ಸೇರಲಿದ್ದು,  ಎರಡು ದಿನವು ಅನ್ನದಾನ ಇರಲಿದೆ ಎಂದರು. ಪೂರ್ವಭಾವಿ ಸಭೆಯಲ್ಲಿ ಸಮಿತಿ ರಚನೆ ನಡೆಯಿತು.
ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ,  ಶ್ರೀನಿವಾಸ ಕಲ್ಯಾಣೋತ್ಸವದ ಅಧ್ಯಕ್ಷರಾದ ಶಶಾಂಕ್ ಕೊಟೇಚಾ,  ಪ್ರಧಾನ ಕಾರ್ಯದರ್ಶಿ ಮನೀಶ್ ಕುಲಾಲ್, ಮಹಿಳಾ ಘಟಕದ ಅಧ್ಯಕ್ಷೆ ಮಲ್ಲಿಕಾ ಪ್ರಸಾದ್,  ಗಣೇಶ್ ಭಟ್ ಮಕರಂದ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪುತ್ತಿಲ ಪರಿವಾರದ ಕಾರ್ಯದರ್ಶಿ ರವಿಕುಮಾರ್ ರೈ ಕೆದಂಬಾಡಿ ಮಠ ಕಾರ್ಯಕ್ರಮ ನಿರೂಪಿಸಿದರು
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪರಿಸರಕ್ಕೆ ಕೊಡುಗೆಯಾಗಬಹುದು ಅಡಿಕೆ ಮರ | ಅಡಿಕೆ ಮರಕ್ಕೆ ಮೌಲ್ಯ ತರಲು ಒಂದು ದಾರಿ | ಒಂದು ಮರಕ್ಕೆ ಕನಿಷ್ಟ 700 ರೂಪಾಯಿ ಪಡೆಯಬಹುದು ಹೇಗೆ ?

ಪರಿಸರ ಪ್ರೇಮಿಗಳಿಗೆ, ನಗರದಲ್ಲಿ ಹೂವು, ಸಣ್ಣ ಸಣ್ಣ ಗಿಡ ಬೆಳೆಸುವವರಿಗೆ ಹೂಕುಂಡವಾಗಿ ಅಡಿಕೆಯ…

2 hours ago

2026 ರ ವೇಳೆಗೆ ತುಮಕೂರಿಗೆ ಎತ್ತಿನಹೊಳೆ ನೀರು

2026 ಜೂನ್ ವೇಳೆಗೆ ಎತ್ತಿನಹೊಳೆ ನೀರು ತುಮಕೂರು ತಲುಪಲಿದೆ ಎಂದು ಗೃಹ ಸಚಿವ…

2 hours ago

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಒಂದೆರೆಡು ಕಡೆ ಮಳೆಯಾಗಿದೆ. ಉತ್ತರ ಕನ್ನಡ, ಉಡುಪಿ,…

3 hours ago

ಹಾವೇರಿ ಜಿಲ್ಲೆಯಲ್ಲಿ ಬಾಡಿಗೆ ಕೊಳವೆಬಾವಿಗಳಿಂದ ನೀರು ಪೂರೈಕೆ

ಹಾವೇರಿ ಜಿಲ್ಲೆಯಲ್ಲಿರುವ 17 ಗ್ರಾಮ ಪಂಚಾಯಿತಿ ವ್ಯಾಪ್ತಿಯ 18 ಗ್ರಾಮಗಳಿಗೆ 21 ಬಾಡಿಗೆ…

3 hours ago

ಶುಕ್ರ ನೇರ ಸಂಚಾರದ ಪರಿಣಾಮ : ಕೆಲ ರಾಶಿಗಳ ಮೇಲೆ ಪ್ರಭಾವ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

4 hours ago

ಹವಾಮಾನ ವರದಿ | 10-04-2025 | ಎ.18 ರ ತನಕವೂ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆ

11.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

18 hours ago