ಸುಳ್ಯ: ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದೆ. ಫಲಿತಾಂಶದಲ್ಲಿ ಹಾಸನ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಕೊನೆಯ ಸ್ಥಾನವನ್ನು ಯಾದಗಿರಿ ಜಿಲ್ಲೆ ಪಡೆದುಕೊಂಡಿದೆ. ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ 7 ನೇ ಸ್ಥಾನ ಪಡೆದುಕೊಂಡಿದೆ.
ಸುಳ್ಯ ತಾಲೂಕಿನ ಸುಬ್ರಹ್ಮಣ್ಯದ ಕುಮಾರಸ್ವಾಮಿ ಆಂಗ್ಲಮಾಧ್ಯಮ ಶಾಲೆಯ ಕೃಪಾ ಕೆ ಆರ್ 624 ಅಂಕಗಳೊಂದಿಗೆ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇಂಗ್ಲಿಷ್ ಹೊರತುಪಡಿಸಿ ಎಲ್ಲಾ ವಿಷಯಗಳಲ್ಲೂ ಪೂರ್ಣ ಅಂಕವನ್ನು ಇವರು ಪಡೆದಿದ್ದಾರೆ.
ಪುತ್ತೂರು ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ಸಿಂಚನಾಲಕ್ಷ್ಮಿ ಕೂಡಾ 624 ಅಂಕ ಪಡೆದಿದ್ದಾರೆ. ಬಂಟ್ವಾಳ ತಾಲೂಕಿನ ವಿದ್ಯಾಗಿರಿಯ ಎಸ್ ವಿ ಎಸ್ ಆಂಗ್ಲಮಾಧ್ಯಮ ಶಾಲೆಯ ಅನುಪಮಾ ಕಾಮತ್ 624 ಅಂಕ ಪಡೆದಿದ್ದಾರೆ.

ಸಿಂಚನಾ ಲಕ್ಷ್ಮಿ
ಈ ಬಾರಿ ರಾಜ್ಯದಲ್ಲಿ 73.7 ರಷ್ಟುವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ರಾಜ್ಯದಲ್ಲಿ ಇಬ್ಬರು ವಿದ್ಯಾರ್ಥಿಗಳು 625 ಅಂಕ ಪಡೆದಿದ್ದಾರೆ. ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಈ ಬಾರಿ 8.41 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು. ಆದರೆ ಸರಾಸರಿ 25 ಸಾವಿರ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "SSLC ಫಲಿತಾಂಶ ಪ್ರಕಟ: ದಕ ಜಿಲ್ಲೆಗೆ 7 ನೇ ಸ್ಥಾನ : ಸುಬ್ರಹ್ಮಣ್ಯದ ವಿದ್ಯಾರ್ಥಿನಿ ಕೃಪಾ ಅಗ್ರಸ್ಥಾನಿ"