ಕರ್ನಾಟಕದಲ್ಲಿ ಸೋಮವಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯುತ್ತದೆ. 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಶುಭಹಾರೈಕೆಗಳು. ಯಾವುದೇ ಗೊಂದಲಗಳಿಲ್ಲದೆ ಪರೀಕ್ಷೆ ಎದುರಿಸಿ, ಶುಭಾಶಯಗಳು – ರೂರಲ್ ಮಿರರ್
ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ 8,73,846 ವಿದ್ಯಾರ್ಥಿಗಳ ಪೈಕಿ 4,52,732 ಬಾಲಕರು ಮತ್ತು 4,21,110 ಮಂದಿ ಬಾಲಕಿಯರು. 3,444 ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45 ರವರೆಗೆ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ 144ನೇ ಸೆಕ್ಷನ್ ಅನ್ವಯ ನಿರ್ಬಂಧ ಆದೇಶ ಜಾರಿ ಮಾಡಲಾಗಿದೆ. ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಿಗಿಭದ್ರತೆ ವ್ಯವಸ್ಥೆ ಮಾಡಲಾಗಿದ್ದು, ಪರೀಕ್ಷಾ ಕೊಠಡಿಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಏಪ್ರಿಲ್ 11 ರವರೆಗೆ ಪರೀಕ್ಷೆ ನಡೆಯಲಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel