ಸುದ್ದಿಗಳು

ನಾಳೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

2022–23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನಾಳೆ (ಸೋಮವಾರ ಮೇ, 8) ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

Advertisement

ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಣೆ ಹೊರಡಿಸಿದ್ದು, ”ಮಾರ್ಚ್ 2023ರ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ: 31/03/2023 ರಿಂದ 15/04/2023ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 08/05/2023 ರಂದು ಬೆಳಿಗ್ಗೆ 10:00 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಳಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. ಫಲಿತಾಂಶವನ್ನು http://karresults.nic.in ಜಾಲತಾಣದಲ್ಲಿ ದಿನಾಂಕ: 08/05/2023 ಬೆಳಿಗ್ಗೆ 11:00 ಗಂಟೆಯ ನಂತರ ವೀಕ್ಷಿಸಬಹುದಾಗಿದೆ” ಎಂದು ತಿಳಿಸಲಾಗಿದೆ.

ಸೋಮವಾರ ಮಧ್ಯಾಹ್ನ ಆಯಾ ಶಾಲೆಗಳಲ್ಲಿಯೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ನಂಬರ್‌ಗಳಿಗೆ ಎಸ್‌ಎಂಎಸ್‌ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಜ್ಯದ 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ಮಾರ್ಚ್‌ 31ರಿಂದ ಏ.15ರವರೆಗೆ 3,305 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಮೌಲ್ಯಮಾಪನಕ್ಕೆ ವ್ಯವಸ್ಥೆ ಮಾಡಲಾಗಿತ್ತು. 63 ಸಾವಿರ ಶಿಕ್ಷಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದರು. ಸೋಮವಾರ ಫಲಿತಾಂಶ ಪ್ರಕಟ ಮಾಡಲಾಗುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ..

2 hours ago

ಭಾರತದಿಂದ ‘ಆಪರೇಷನ್ ಸಿಂಧೂರ್’ | ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ ನಾಶ | 9 ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ |

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…

3 hours ago

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?

ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…

1 day ago

ಪ್ರೀತಿಯ ಹಂಬಲ ಇರುವ, ವಯಸ್ಸಾದ, ಅನುಭವ ಹೊಂದಿದ ವ್ಯಕ್ತಿಗಳನ್ನು ಗೌರವಿಸುವ 5 ರಾಶಿಯ ಹುಡುಗಿಯರು |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago

ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ

ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…

1 day ago