ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ | 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ನೋಂದಣಿ..!

March 31, 2023
10:51 AM

ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಪರಿಗಣಿಸಲಾದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ಇಂದಿನಿಂದ ಆರಂಭವಾಗಲಿದೆ. ರಾಜ್ಯ ವಿಧಾನಸಭಾ ಚುನಾವಣಾ ಪ್ರಕ್ರಿಯೆ ನಡುವೆಯೂ ಏಪ್ರಿಲ್ 15 ರವರೆಗೂ ನಡೆಯಲಿರುವ  ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.

Advertisement

ಈ ಬಾರಿ 5,833 ಸರ್ಕಾರಿ ಶಾಲೆ ವಿದ್ಯಾರ್ಥಿಗಳು  3,605 ಅನುದಾನಿತ,  6,060 ಅನುದಾನ ರಹಿತ ಶಾಲೆಗಳ ವಿದ್ಯಾರ್ಥಿಗಳು ಸೇರಿದಂತೆ ಒಟ್ಟಾರೇ  8.42 ಲಕ್ಷ ವಿದ್ಯಾರ್ಥಿಗಳು ಪರಿಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ.

ಪರೀಕ್ಷೆ ಆರಂಭದ ದಿನವಾದ ಶುಕ್ರವಾರ  ಬೆಳಗ್ಗೆ 10-30 ರಿಂದ ಮಧ್ಯಾಹ್ನ 1-45ರವರೆಗೆ ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠ, ತಮಿಳು, ಉರ್ದು ಮತ್ತು ಇಂಗ್ಲೀಷ್ ವಿಷಯಗಳ ಪರೀಕ್ಷೆ ನಡೆಯಲಿದೆ. ನಾಳೆ ಗಣಿತ ಮತ್ತು ಸಮಾಜ ಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದ್ದು, ನಕಲು ತಡೆಗೆ ಬಿಗಿ ಕ್ರಮ ಕೈಗೊಳ್ಳಲಾಗಿದೆ.

ಪರೀಕ್ಷಾ ಕೇಂದ್ರದ ಬಳಿಯಿರುವ  ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ  ಸಕಲ ಸಿದ್ದತೆ ಕೈಗೊಳ್ಳಲಾಗಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಪರೀಕ್ಷೆ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣದ ಅವಕಾಶ ನೀಡಲಾಗಿದೆ. ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಪ್ರಶ್ನೆ ಪತ್ರಿಕೆಗಳನ್ನು ಜಿಲ್ಲಾ, ತಾಲೂಕು  ಖಜಾನೆಯಿಂದ ಕೇಂದ್ರಗಳಿಗೆ ತಲುಪಿಸಲು ವಿತರಣಾ ಮಾರ್ಗಗಳನ್ನು ರಚಿಸಲಾಗಿದೆ. ನಿಯಮಾವಳಿ ರೀತಿ ವೇಳಾಪಟ್ಟಿಯಂತೆ ಸಕಾಲಕ್ಕೆ ಪ್ರಶ್ನೆ ಪತ್ರಿಕೆಯನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸುವ ವ್ಯವಸ್ಥೆ ಮಾಡಿ ಕೊಳ್ಳಲಾಗಿದೆ. ಈ ವರ್ಷವೂ ಕೊರೋನಾ ಬ್ಯಾಚ್ ಎಂದು ಪರಿಗಣಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ಇರುತ್ತದೆ ಎಂದು ರಾಜ್ಯ ಪ್ರೌಢ ಶಿಕ್ಷಣಾ ಪರೀಕ್ಷಾ ಮಂಡಳಿ ನಿರ್ದೇಶಕ ಎಚ್.ಎ.ಗೋಪಾಲ ತಿಳಿಸಿದ್ದಾರೆ.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿಕರ ಪರವಾದ ಬರಹಗಾರರ ಮುಂದಿರುವ ಸವಾಲುಗಳು
May 8, 2025
7:21 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಮೇ 13 ರಿಂದ 25 ರವರೆಗೆ ಈ ರಾಶಿಗಳಿಗೆ ಅದೃಷ್ಟ!, ಕೆಲವು ರಾಶಿಗಳಿಗೆ ಕಠಿಣ ಕಾಲ
May 8, 2025
6:54 AM
by: ದ ರೂರಲ್ ಮಿರರ್.ಕಾಂ
ಅಪರೇಷನ್ ಸಿಂಧೂರ | ಭಾರತೀಯ ಸೇನೆಯ ಕಾರ್ಯಾಚರಣೆಗೆ ರಾಜ್ಯದೆಲ್ಲೆಡೆ ಸಂಭ್ರಮಾಚರಣೆ
May 7, 2025
10:02 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 07-05-2025 | ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆ | ಮೇ 11 ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣ
May 7, 2025
2:42 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group