ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2022-23 ನೇ ಸಾಲಿನ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಪ್ರಕಟಿಸಿದೆ. ಈ ಬಾರಿ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಒಟ್ಟು ಶೇಕಡಾ 83.89ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪರೀಕ್ಷೆ ಬರೆದ ಒಟ್ಟು 8,35,102 ವಿದ್ಯಾರ್ಥಿಗಳ ಪೈಕಿ 7,00,619 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಒಟ್ಟು 3,41,108 ಬಾಲಕರು ಹಾಗೂ 3,59,511 ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಈ ಬಾರಿ ಚಿತ್ರದುರ್ಗ ಜಿಲ್ಲೆ ಶೇಕಡಾ 96.08ರಷ್ಟು ಫಲಿತಾಂಶದೊಂದಿಗೆ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ. ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶದಲ್ಲಿ ಮಂಡ್ಯ ಜಿಲ್ಲೆ ಎರಡನೇ ಸ್ಥಾನ ಪಡೆದಿದ್ದು, ಹಾಸನ ಜಿಲ್ಲೆ ಮೂರನೇ ಸ್ಥಾನ ಗಳಿಸಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ.ದಕ್ಷಿಣ ಕನ್ನಡ ಜಿಲ್ಲೆ 19 ನೇ ಸ್ಥಾನ ಪಡೆದುಕೊಂಡಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel