ಕುಕ್ಕೆ ಸುಬ್ರಹ್ಮಣ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ಆರೋಪ | ಕಾಲೇಜಿನ ಉಪನ್ಯಾಸಕ ನ್ಯಾಯಾಲಯಕ್ಕೆ ಶರಣು |

February 21, 2022
9:06 PM

ಕುಕ್ಕೆ ಸುಬ್ರಹ್ಮಣ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ಆರೋಪ ಹೊತ್ತಿದ್ದ ಉಪನ್ಯಾಸಕ ಗುರುರಾಜ್‌ ಸೋಮವಾರ ಪುತ್ತೂರು ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಕಳೆದ ಒಂದು ತಿಂಗಳ ಹಿಂದೆ ಜಾಮೀನು ರದ್ದಾಗಿದ್ದರೂ ತಲೆಮರೆಸಿಕೊಂಡಿದ್ದರು. ಸೋಮವಾರ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ ಪದವಿ ಪೂರ್ವ ಕಾಲೇಜಿನ  ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಸುಮಾರು 5 ತಿಂಗಳ ಹಿಂದೆ ಸುಬ್ರಹ್ಮಣ್ಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಾದ ಒಂದೇ ದಿನದಲ್ಲಿ ಜಾಮೀನಿನಲ್ಲಿ ಉಪನ್ಯಾಸಕ ಗುರುರಾಜ್‌ ಜಾಮೀನಿನ ಮೇಲೆ ಹೊರಬಂದಿದ್ದರು. ಇದನ್ನು ಪ್ರಶ್ನಿಸಿ ವಿದ್ಯಾರ್ಥಿನಿ ಪೋಷಕರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಹೈಕೋರ್ಟ್‌ ನಲ್ಲಿ ಜ.25  ರಂದು ಜಾಮೀನು ರದ್ದಾಗಿ ಬಂಧನಕ್ಕೆ ವಾರಂಟ್‌ ಜಾರಿಯಾಗಿತ್ತು. ಅಂದಿನಿಂದ ತಲೆ ಮರೆಸಿಕೊಂಡು ಉಪನ್ಯಾಸಕ ಗುರುರಾಜ್‌ ಅವರು ಪೊಲೀಸರಿಗೂ ಸಿಕ್ಕಿರಲಿಲ್ಲ. ವಾರದಿಂದ ವಿದ್ಯಾರ್ಥಿನಿ ಪೋಷಕರು ಮತ್ತೆ ಅಲೆದಾಟ ನಡೆಸಿ ನ್ಯಾಯಕ್ಕಾಗಿ ಹೋರಾಟ ಆರಂಭಿಸಿದ್ದರು. ಈ  ಪ್ರಕರಣದಲ್ಲಿ ಇಲಾಖೆಗಳ ನಿರ್ಲಕ್ಷ್ಯದ ಬಗ್ಗೆಯೂ ಸಾರ್ವಜನಿಕರೂ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೆಲ್ಲದರ ಬೆನ್ನಲ್ಲೇ ಉಪನ್ಯಾಸಕ ಗುರುರಾಜ್‌ ಸೋಮವಾರ  ಪುತ್ತೂರು ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಆರೋಪಿ ಉಪನ್ಯಾಸಕನಿಗೆ ಇದೀಗ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.

ಈ ನಡುವೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತವು ಕೂಡಾ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಉಪನ್ಯಾಸಕ ಗುರುರಾಜ್‌ ಅವರನ್ನು ಈಗಾಗಲೇ ಕೆಲಸದಿಂದ ವಜಾ ಮಾಡಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ
August 18, 2026
7:18 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ
August 18, 2026
7:10 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror