ಕುಕ್ಕೆ ಸುಬ್ರಹ್ಮಣ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ಆರೋಪ ಹೊತ್ತಿದ್ದ ಉಪನ್ಯಾಸಕ ಗುರುರಾಜ್ ಸೋಮವಾರ ಪುತ್ತೂರು ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಕಳೆದ ಒಂದು ತಿಂಗಳ ಹಿಂದೆ ಜಾಮೀನು ರದ್ದಾಗಿದ್ದರೂ ತಲೆಮರೆಸಿಕೊಂಡಿದ್ದರು. ಸೋಮವಾರ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಸುಮಾರು 5 ತಿಂಗಳ ಹಿಂದೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಾದ ಒಂದೇ ದಿನದಲ್ಲಿ ಜಾಮೀನಿನಲ್ಲಿ ಉಪನ್ಯಾಸಕ ಗುರುರಾಜ್ ಜಾಮೀನಿನ ಮೇಲೆ ಹೊರಬಂದಿದ್ದರು. ಇದನ್ನು ಪ್ರಶ್ನಿಸಿ ವಿದ್ಯಾರ್ಥಿನಿ ಪೋಷಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ನಲ್ಲಿ ಜ.25 ರಂದು ಜಾಮೀನು ರದ್ದಾಗಿ ಬಂಧನಕ್ಕೆ ವಾರಂಟ್ ಜಾರಿಯಾಗಿತ್ತು. ಅಂದಿನಿಂದ ತಲೆ ಮರೆಸಿಕೊಂಡು ಉಪನ್ಯಾಸಕ ಗುರುರಾಜ್ ಅವರು ಪೊಲೀಸರಿಗೂ ಸಿಕ್ಕಿರಲಿಲ್ಲ. ವಾರದಿಂದ ವಿದ್ಯಾರ್ಥಿನಿ ಪೋಷಕರು ಮತ್ತೆ ಅಲೆದಾಟ ನಡೆಸಿ ನ್ಯಾಯಕ್ಕಾಗಿ ಹೋರಾಟ ಆರಂಭಿಸಿದ್ದರು. ಈ ಪ್ರಕರಣದಲ್ಲಿ ಇಲಾಖೆಗಳ ನಿರ್ಲಕ್ಷ್ಯದ ಬಗ್ಗೆಯೂ ಸಾರ್ವಜನಿಕರೂ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೆಲ್ಲದರ ಬೆನ್ನಲ್ಲೇ ಉಪನ್ಯಾಸಕ ಗುರುರಾಜ್ ಸೋಮವಾರ ಪುತ್ತೂರು ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಆರೋಪಿ ಉಪನ್ಯಾಸಕನಿಗೆ ಇದೀಗ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.
ಈ ನಡುವೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತವು ಕೂಡಾ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಉಪನ್ಯಾಸಕ ಗುರುರಾಜ್ ಅವರನ್ನು ಈಗಾಗಲೇ ಕೆಲಸದಿಂದ ವಜಾ ಮಾಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…
ಅಂಚೆ ಇಲಾಖೆಯಿಂದ ಬೆಳೆಗಾರರಿಂದ ಗ್ರಾಹಕರು ನೇರ ಮಾವು ಮಾರಾಟ ಯಶಸ್ವೀ ಸೇವೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು : ಗುಜ್ಜೆ 1 ಕಪ್ ಬೇಯಿಸಿ…
ಜಮ್ಮು- ಕಾಶ್ಮೀರದ ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…
23.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…