ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಕಾಡಾನೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಆನೆಗಳನ್ನು ಮರಳಿ ಕಾಡಿಗಟ್ಟಲು ಪ್ರತ್ಯೇಕ ಆನೆ ಕಾರ್ಯಪಡೆಗೆ 48 ಸಿಬ್ಬಂದಿಯನ್ನು ನಿಯೋಜನೆ ಮಾಡಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅನುಮೋದನೆ ನೀಡಿದ್ದಾರೆ.
ಈ ಕಾರ್ಯಪಡೆಯ ನೇತೃತ್ವವನ್ನು ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಹಿಸಲಿದ್ದು, ಪಡೆಯಲ್ಲಿ ಒಬ್ಬರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಒಬ್ಬರು ಪಶುವೈದ್ಯಾಧಿಕಾರಿ, ಒಬ್ಬರು ವಲಯ ಅರಣ್ಯಾಧಿಕಾರಿ, ನಾಲ್ವರು ಉಪ ವಲಯ ಅರಣ್ಯಾಧಿಕಾರಿ ಹಾಗೂ 8 ಅರಣ್ಯ ರಕ್ಷಕರು ಹಾಗೂ 32 ಹೊರಗುತ್ತಿಗೆಯ ಸಿಬ್ಬಂದಿ ಇರಲಿದ್ದಾರೆ. ಆನೆ ಕಾರ್ಯಪಡೆಯು ಕಾಡಾನೆಗಳು ಓಡಾಡುವ ವಸತಿ ಪ್ರದೇಶ, ರೈತರ ತೋಟ, ಜಮೀನಿನ ಬಳಿ ಗಸ್ತು ತಿರುಗಲಿದ್ದು, ಆನೆಗಳು ಕಂಡು ಬಂದಲ್ಲಿ ಕಾಡಿಗೆ ಮರಳಿಸುವ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಈ ನಡುವೆ, ತುಮಕೂರು ಜಿಲ್ಲೆಯ ವಿವಿಧೆಡೆ ಚಿರತೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಚಿರತೆ ಕಾರ್ಯಪಡೆ ರಚಿಸಿ, 59 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಚಿರತೆ ಕಾರ್ಯಪಡೆ ಮುಖ್ಯಸ್ಥರಾಗಿರಲಿದ್ದು, ಪಡೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಒಬ್ಬರು ಪಶುವೈದ್ಯರು, ಒಬ್ಬ ವಲಯ ಅರಣ್ಯಾಧಿಕಾರಿ, 4 ಉಪ ವಲಯ ಅರಣ್ಯಾಧಿಕಾರಿ, 8 ಗಸ್ತು ಅರಣ್ಯ ಪಾಲಕರು, 5 ವಾಹನ ಚಾಲಕರು ಹಾಗೂ ಹೊರಗುತ್ತಿಗೆಯ 40 ಸಿಬ್ಬಂದಿಯನ್ನು ನಿಯೋಜಿಸಲು ಸಚಿವರು ಒಪ್ಪಿಗೆ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…