Advertisement
MIRROR FOCUS

ಕೃಷಿಗೆ ಕಾಡಾನೆ ಹಾವಳಿ, ಚಿರತೆ ದಾಳಿ | ಕಾರ್ಯಪಡೆಗಳಿಗೆ ಸಿಬಂದಿಗಳ ನಿಯೋಜನೆ

Share

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಕಾಡಾನೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಆನೆಗಳನ್ನು ಮರಳಿ ಕಾಡಿಗಟ್ಟಲು ಪ್ರತ್ಯೇಕ ಆನೆ ಕಾರ್ಯಪಡೆಗೆ 48 ಸಿಬ್ಬಂದಿಯನ್ನು ನಿಯೋಜನೆ ಮಾಡಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅನುಮೋದನೆ ನೀಡಿದ್ದಾರೆ.

ಈ ಕಾರ್ಯಪಡೆಯ ನೇತೃತ್ವವನ್ನು ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಹಿಸಲಿದ್ದು, ಪಡೆಯಲ್ಲಿ ಒಬ್ಬರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಒಬ್ಬರು ಪಶುವೈದ್ಯಾಧಿಕಾರಿ, ಒಬ್ಬರು ವಲಯ ಅರಣ್ಯಾಧಿಕಾರಿ, ನಾಲ್ವರು ಉಪ ವಲಯ ಅರಣ್ಯಾಧಿಕಾರಿ ಹಾಗೂ 8 ಅರಣ್ಯ ರಕ್ಷಕರು ಹಾಗೂ 32 ಹೊರಗುತ್ತಿಗೆಯ ಸಿಬ್ಬಂದಿ ಇರಲಿದ್ದಾರೆ.  ಆನೆ ಕಾರ್ಯಪಡೆಯು ಕಾಡಾನೆಗಳು ಓಡಾಡುವ ವಸತಿ ಪ್ರದೇಶ, ರೈತರ ತೋಟ, ಜಮೀನಿನ ಬಳಿ ಗಸ್ತು ತಿರುಗಲಿದ್ದು, ಆನೆಗಳು ಕಂಡು ಬಂದಲ್ಲಿ ಕಾಡಿಗೆ ಮರಳಿಸುವ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಈ ನಡುವೆ, ತುಮಕೂರು ಜಿಲ್ಲೆಯ ವಿವಿಧೆಡೆ ಚಿರತೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಚಿರತೆ ಕಾರ್ಯಪಡೆ ರಚಿಸಿ, 59 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಚಿರತೆ ಕಾರ್ಯಪಡೆ ಮುಖ್ಯಸ್ಥರಾಗಿರಲಿದ್ದು, ಪಡೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಒಬ್ಬರು ಪಶುವೈದ್ಯರು, ಒಬ್ಬ ವಲಯ ಅರಣ್ಯಾಧಿಕಾರಿ, 4 ಉಪ ವಲಯ ಅರಣ್ಯಾಧಿಕಾರಿ, 8 ಗಸ್ತು ಅರಣ್ಯ ಪಾಲಕರು, 5 ವಾಹನ ಚಾಲಕರು ಹಾಗೂ ಹೊರಗುತ್ತಿಗೆಯ 40 ಸಿಬ್ಬಂದಿಯನ್ನು ನಿಯೋಜಿಸಲು ಸಚಿವರು ಒಪ್ಪಿಗೆ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

5 hours ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

6 hours ago

ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ

ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…

12 hours ago

ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ

ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…

12 hours ago

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

20 hours ago

ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ

ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…

20 hours ago