ದೇಶದಲ್ಲಿ ಪ್ರಸ್ತುತ 1 ಲಕ್ಷದ 92 ಸಾವಿರಕ್ಕೂ ಅಧಿಕ ನವೋದ್ಯಮಗಳು(Startups) ಕಾರ್ಯನಿರ್ವಹಿಸುತ್ತಿವೆ. ಈ ಪೈಕಿ ಶೇಕಡ 48ರಷ್ಟು ನವೋದ್ಯಮಗಳನ್ನು ಮಹಿಳೆಯರು ಮುನ್ನಡೆಸುತ್ತಿದ್ದು, ಶೇಕಡ 52ರಷ್ಟು ನವೋದ್ಯಮಗಳು ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ಸ್ಥಾಪನೆಯಾಗಿರುವುದು ಸಂತಸದಾಯವಾಗಿದ್ದು ನವೋದ್ಯಮಗಳು ನೂತನ ಭಾರತದ ಬೆನ್ನೆಲುಬಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
ಅವರು ಗುಜರಾತ್ ನ ಗಾಂಧಿನಗರದಲ್ಲಿ ನವೋದ್ಯಮ ಶೃಂಗಸಭೆ 2025 ಉದ್ಘಾಟಿಸಿದರು. ಪ್ರತಿ ವಲಯದಲ್ಲೂ ನವೋದ್ಯಮಗಳು ವಿನೂತನ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ, ನವೋದ್ಯಮಗಳಿಗೆ ಅಗತ್ಯ ಮೂಲಭೂತ ಸೌಕರ್ಯ , ಬ್ಯಾಂಕಿಂಗ್ ನೆರವನ್ನು ಒದಗಿಸಲಾಗುತ್ತಿದೆ. ಇದಕ್ಕಾಗಿ 10 ಸಾವಿರ ಕೋಟಿ ರೂಪಾಯಿಗಳ ನಿಧಿಯನ್ನು ಸ್ಥಾಪಿಸಲಾಗಿದೆ. ಮೇಕ್ ಇನ್ ಇಂಡಿಯಾ, ಉತ್ಪಾದನಾ ಆಧಾರಿತ ಸಹಾಯಧನ ಸೇರಿದಂತೆ ಹಲವು ಸೌಲಭ್ಯಗಳು ದೊರೆಯುತ್ತಿವೆ. ಸರಕು ಮತ್ತು ಸೇವಾ ತೆರಿಗೆಗಳನ್ನು ಇಳಿಕೆ ಮಾಡಿರುವುದು ನವೋದ್ಯಮಗಳಿಗೆ ವರದಾನವಾಗಲಿದೆ ಎಂದರು. ಸರ್ಕಾರದ ತೆರಿಗೆ ಸುಧಾರಣೆಗಳು ಪ್ರಾಮಾಣಿಕ ತೆರಿಗೆದಾರರಲ್ಲಿ ವಿಶ್ವಾಸ ಮೂಡಿಸಿವೆ. ಜನರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಬ್ಯಾಂಕಿಂಗ್ ವ್ಯವಸ್ಥೆ ಹಾಗೂ ತೆರಿಗೆ ವ್ಯವಸ್ಥೆಯಲ್ಲಿ ಅನೇಕ ಸುಧಾರಣೆಗಳನ್ನು ತರಲಾಗಿದೆ. ದೇಶದ ಪ್ರಗತಿಯಲ್ಲಿ ಯುವಜನತೆಯ ಕೊಡುಗೆ ಪ್ರಮುಖವಾಗಿದ್ದು, ನವೋದ್ಯಮಗಳು ನೂತನ ಭಾರತದ ಬೆನ್ನೆಲುಬಾಗಿವೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.

