Advertisement
MIRROR FOCUS

ನವೋದ್ಯಮಗಳು ನೂತನ ಭಾರತದ ಬೆನ್ನೆಲುಬು

Share

ದೇಶದಲ್ಲಿ ಪ್ರಸ್ತುತ 1 ಲಕ್ಷದ 92 ಸಾವಿರಕ್ಕೂ ಅಧಿಕ ನವೋದ್ಯಮಗಳು(Startups) ಕಾರ್ಯನಿರ್ವಹಿಸುತ್ತಿವೆ. ಈ ಪೈಕಿ ಶೇಕಡ 48ರಷ್ಟು ನವೋದ್ಯಮಗಳನ್ನು ಮಹಿಳೆಯರು ಮುನ್ನಡೆಸುತ್ತಿದ್ದು, ಶೇಕಡ 52ರಷ್ಟು ನವೋದ್ಯಮಗಳು ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ಸ್ಥಾಪನೆಯಾಗಿರುವುದು ಸಂತಸದಾಯವಾಗಿದ್ದು ನವೋದ್ಯಮಗಳು ನೂತನ ಭಾರತದ ಬೆನ್ನೆಲುಬಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.

ಅವರು ಗುಜರಾತ್ ನ ಗಾಂಧಿನಗರದಲ್ಲಿ ನವೋದ್ಯಮ ಶೃಂಗಸಭೆ 2025 ಉದ್ಘಾಟಿಸಿದರು.  ಪ್ರತಿ ವಲಯದಲ್ಲೂ ನವೋದ್ಯಮಗಳು ವಿನೂತನ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ, ನವೋದ್ಯಮಗಳಿಗೆ ಅಗತ್ಯ ಮೂಲಭೂತ ಸೌಕರ್ಯ , ಬ್ಯಾಂಕಿಂಗ್ ನೆರವನ್ನು ಒದಗಿಸಲಾಗುತ್ತಿದೆ. ಇದಕ್ಕಾಗಿ 10 ಸಾವಿರ ಕೋಟಿ ರೂಪಾಯಿಗಳ ನಿಧಿಯನ್ನು ಸ್ಥಾಪಿಸಲಾಗಿದೆ. ಮೇಕ್ ಇನ್ ಇಂಡಿಯಾ, ಉತ್ಪಾದನಾ ಆಧಾರಿತ ಸಹಾಯಧನ ಸೇರಿದಂತೆ ಹಲವು ಸೌಲಭ್ಯಗಳು ದೊರೆಯುತ್ತಿವೆ. ಸರಕು ಮತ್ತು ಸೇವಾ ತೆರಿಗೆಗಳನ್ನು ಇಳಿಕೆ ಮಾಡಿರುವುದು ನವೋದ್ಯಮಗಳಿಗೆ ವರದಾನವಾಗಲಿದೆ ಎಂದರು. ಸರ್ಕಾರದ ತೆರಿಗೆ ಸುಧಾರಣೆಗಳು ಪ್ರಾಮಾಣಿಕ ತೆರಿಗೆದಾರರಲ್ಲಿ ವಿಶ್ವಾಸ ಮೂಡಿಸಿವೆ. ಜನರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಬ್ಯಾಂಕಿಂಗ್ ವ್ಯವಸ್ಥೆ ಹಾಗೂ ತೆರಿಗೆ ವ್ಯವಸ್ಥೆಯಲ್ಲಿ ಅನೇಕ ಸುಧಾರಣೆಗಳನ್ನು ತರಲಾಗಿದೆ. ದೇಶದ ಪ್ರಗತಿಯಲ್ಲಿ ಯುವಜನತೆಯ ಕೊಡುಗೆ ಪ್ರಮುಖವಾಗಿದ್ದು, ನವೋದ್ಯಮಗಳು ನೂತನ ಭಾರತದ ಬೆನ್ನೆಲುಬಾಗಿವೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

17 minutes ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

26 minutes ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

30 minutes ago

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

22 hours ago

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…

1 day ago

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

2 days ago