ಕರ್ನಾಟಕದಲ್ಲಿ 80 ಸಕ್ಕರೆ ಕಾರ್ಖಾನೆಗಳಿದ್ದು, ಈ ಪೈಕಿ ಕೆಲವು ಮುಚ್ಚಿಹೋಗಿವೆ. ಈಗಿರುವ ಕಾರ್ಖಾನೆಗಳಿಗೆ ಹೊಸ ತಂತ್ರಜ್ಞಾನ ಅಳವಡಿಕೆ ಹಾಗೂ ಹೆಚ್ಚು ಇಳುವರಿ ನೀಡುವ ಕಬ್ಬು ಬೆಳೆಯುವ ನೂತನ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಲಾಗುವುದು ಎಂದು ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟಿಲ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಕ್ಕರೆ ಉತ್ಪಾದನೆಯಲ್ಲಿ ಕರ್ನಾಟಕ ಮೂರನೇ ಅತೀ ದೊಡ್ಡ ರಾಜ್ಯವಾಗಿದೆ. ಆದರೆ, ಕಳೆದ ವರ್ಷದ ಬರದ ಕಾರಣದಿಂದಾಗಿ ಸಕ್ಕರೆ ಉತ್ಪಾದನೆ ಕಡಿಮೆಯಾಗಿದೆ. ಮುಂಬರುವ ದಿನಗಳಲ್ಲಿ ಆರು ಲಕ್ಷ ಮೆಟ್ರಿಕ್ ಟನ್ ಸಕ್ಕರೆ ಉತ್ಪಾದನೆ ಮಾಡುವ ಗುರಿ ಹೊಂದಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಕೆಲ ಕಾರ್ಖಾನೆಗಳಲ್ಲಿ ಅವ್ಯವಹಾರ ಮೇಲ್ನೋಟಕ್ಕೆ ಸಾಬೀತಾಗಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel