ರಾಜ್ಯ ಬಜೆಟ್ ಗೆ ಕ್ಷಣಗಣನೆ ಆರಂಭವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ(ಫೆ.17) ಬಜೆಟ್ ಮಂಡಿಸಲಿದ್ದಾರೆ. ಪ್ರಸಕ್ತ ಸಾಲಿನಲ್ಲಿ ರಾಜ್ಯ ಬಜೆಟ್ ನಲ್ಲಿ ರಾಜ್ಯದ ಜನತೆ ಹಲವು ನಿರೀಕ್ಷೆಗಳನ್ನಿಟ್ಟಿದ್ದು, ಹೊಸ ಕೃಷಿ ನೀತಿಯನ್ನು ಘೋಷಿಸುವ ಸಾಧ್ಯತೆಗಳಿವೆ, ಗ್ರಾಮೀಣಾಭಿವೃದ್ಧಿ ಕಡೆಗೂ ಕೊಡುಗೆಗಳ ನಿರೀಕ್ಷೆ ಇದೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ಕಳೆದ ವರ್ಷ ಚೊಚ್ಚಲ ಬಜೆಟ್ ನಲ್ಲಿ ಕೃಷಿ ಮತ್ತು ಸಂಬಂಧಿತ ವಲಯಗಳಿಗೆ 33,700 ಕೋಟಿ ರೂ ಮೀಸಲಿಟ್ಟಿದ್ದರು. ರೈತ ಶಕ್ತಿ ಸೇರಿದಂತೆ ರೈತರಿಗೆ ಯಂತ್ರೋಪಕರಣಗಳನ್ನು ಖರೀದಿಸಲು ಆರ್ಥಿಕ ನೆರವು ನೀಡಲಾಗುವುದು ಎಂದು ಘೋಷಿಸಿದ್ದರು. ಗರಿಷ್ಟ 5 ಎಕರೆಗೆ ಒಳಪಟ್ಟು ಎಕರೆಗೆ 250 ರೂಪಾಯಿ ಡೀಸೆಲ್ ಸಬ್ಸಿಡಿಯನ್ನು ಸಹ ಘೋಷಿಸಿದ್ದರು. ಈ ಬಾರಿಯೂ ಕೂಡ ರೈತರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಬೊಮ್ಮಾಯಿ ಅವರು ಇತ್ತೀಚೆಗೆ ಘೋಷಿಸಿದ್ದರು. ಹೀಗಾಗಿ ಈ ಬಾರಿ ರಾಜ್ಯ ಬಜೆಟ್ ನಲ್ಲಿ ಕೃಷಿ ಕ್ಷೇತ್ರದಲ್ಲಿ ಹಲವು ನಿರೀಕ್ಷೆಗಳನ್ನಿಟ್ಟಿದ್ದು, ಹೊಸ ಕೃಷಿ ನೀತಿಯನ್ನು ಘೋಷಿಸುವ ಸಾಧ್ಯತೆಗಳಿವೆ.
ಕೋವಿಡ್-19 ಈಗ ನಮ್ಮ ಜೀವನದ ಭಾಗ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ದಕ್ಷಿಣಕನ್ನಡ, ಉಡುಪಿ, ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆಯಾಗುತ್ತಿದೆ.…
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ 2 ಅಥವಾ 3…
ಕಳೆದ 16 ವರ್ಷಗಳ ದಾಖಲೆಗಳ ಪ್ರಕಾರ ನಿಗದಿತ ದಿನಕ್ಕಿಂತ ಮೊದಲೇ ಈ ಬಾರಿ…
ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…
ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ.…