ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ಬಿಳಿ ಜೋಳ ಖರೀದಿಗೆ ರಾಜ್ಯ ಸರ್ಕಾರ ಮುಂದಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ರೈತರಿಂದ ಭತ್ತ ಮತ್ತು ಬಿಳಿಜೋಳ ಖರೀದಿಗೆ ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಪ್ರಭಾರ ಜಿಲ್ಲಾಧಿಕಾರಿ ಡಾ.ಸುರೇಶ್ ಇಟ್ನಾಳ್ ತಿಳಿಸಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಮೂಲಕ ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ ಭತ್ತ ಹಾಗೂ ಬಿಳಿ ಜೋಳವನ್ನು ರೈತರಿಂದ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲಾ ವ್ಯಾಪ್ತಿಯಲ್ಲಿನ ಬಿತ್ತನೆ ಪ್ರಮಾಣ ಆಧರಿಸಿ ಭತ್ತ ಪ್ರತಿ ಕ್ವಿಂಟಾಲ್‌ಗೆ 2300 ರೂಪಾಯಿ ಹಾಗೂ ಹೈಬ್ರಿಡ್ ಜೋಳವನ್ನು ಪ್ರತಿ ಕ್ವಿಂಟಾಲ್‌ಗೆ 3371 ರೂಪಾಯಿಯಂತೆ ಖರೀದಿಸಲಾಗುತ್ತಿದ್ದು, ಮೇ 31 ರ ವರೆಗೆ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ 90 ಸಾವಿರ ಕ್ವಿಂಟಾಲ್ ಜೋಳ ಖರೀದಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯ ಮಹಂತೇಶ ದಾನಮ್ಮನವರ್ ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel